
ಗದ್ವಾಲ್: ಎರಡು ದಿನಗಳ ಹಿಂದಷ್ಟೇ ನಟಿ ರಶ್ಮಿಕಾ ಮಂದಣ್ಣ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅವರ ಕಾರು ಸೋಮವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಇಂದು ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಟ ವಿಜಯ್ ದೇವರಕೊಂಡ ಅವರ ಕಾರು ಸಣ್ಣ ಅಪಘಾತಕ್ಕೀಡಾಗಿದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನೆರೆಯ ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರು ವಿಜಯ್ ದೇವರಕೊಂಡ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ.
ಅಪಘಾತದ ನಂತರ, ನಟ ತನ್ನ ವಾಹನದಿಂದ ಇಳಿದು ಸ್ನೇಹಿತನ ಕಾರಿನಲ್ಲಿ ತೆರಳಿದರು ಎಂದು ಪೊಲೀಸರು ತಿಳಿಸಿದ್ದಾರೆ.
Advertisement