

ಬೆಂಗಳೂರು: 2019ನೇ ಸಾಲಿನ ಡಾ. ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್ , ಡಾ. ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟಗೊಂಡಿದೆ. ನಟಿ ಉಮಾಶ್ರೀಗೆ 2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಲಭಿಸಿದೆ.ಉಮಾಶ್ರೀ ಅವರು ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ, ಅವರ ಅತ್ಯುತ್ತಮ ನಟನೆಯನ್ನು ಗುರುತಿಸಿ ರಾಜ್ಕುಮಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಷ್ಣುವರ್ಧನ್ ಪ್ರಶಸ್ತಿಗೆ ಹಿರಿಯ ನಟ ರಿಚರ್ಡ್ ಕ್ಯಾಸ್ಟಲಿನೋ ಅವರನ್ನು ಆಯ್ಕೆ ಮಾಡಲಾಗಿದೆ. ರಿಚರ್ಡ್ ಕ್ಯಾಸ್ಟಲಿನೋ ಅವರು ಕನ್ನಡ, ತುಳು, ಕೊಂಕಣಿ ಸಿನಿಮಾಗಳಲ್ಲಿ ವರ್ಷಗಳ ಕಾಲ ನಟಿಸಿದ್ದಾರೆ.
ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್ಆರ್ ನಂಜುಂಡೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ಐದು ಲಕ್ಷ ರೂಪಾಯಿ ನಗದು ಬಹುಮಾನದ ಜೊತೆಗೆ ಚಿನ್ನ ಲೇಪಿತ ಪದಕ ಒಳಗೊಂಡಿರಲಿವೆ.
ಪ್ರಶಸ್ತಿಗಳ ಜೊತೆಗೆ ಬೆಳ್ಳಿ ತೊರೆಗೆ ಉತ್ತಮ ಸಿನಿಮಾ ಪ್ರಬಂಧ ಮತ್ತು ‘ಗುಳೆ’ ಸಿನಿಮಾಕ್ಕೆ ಉತ್ತಮ ಕಿರುಚಿತ್ರ ಪ್ರಶಸ್ತಿಗಳನ್ನು ಸಹ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಗಳು 25 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ಬೆಳ್ಳಿ ಪದಕಗಳನ್ನು ಒಳಗೊಂಡಿರಲಿವೆ.
Advertisement