
ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA 2025) ರಲ್ಲಿ ಮ್ಯಾಕ್ಸ್’ ಸಿನಿಮಾ ನಟನೆಗೆ ಕಿಚ್ಚ ಸುದೀಪ್ (Sudeep) ಅವರಿಗೆ ಅತ್ಯುತ್ತಮ ನಟ ಅವಾರ್ಡ್ ದೊರೆತಿದೆ. ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ.
ನಿನ್ನೆ ರಾತ್ರಿ ದುಬೈಯಲ್ಲಿ ನೆರವೇರಿದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿದ್ದು, 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು.
ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಇನ್ನು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ ಅವರು ಅತ್ಯುತ್ತಮ ನಿರ್ದೇಶಕ ಅವಾರ್ಡ್ ಪಡೆದಿದ್ದಾರೆ. ‘02’ ನಟನೆಗೆ ಆಶಿಕಾ ರಂಗನಾಥ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ‘ಭೀಮ’ ಸಿನಿಮಾ ನಟನೆಗೆ ದುನಿಯಾ ವಿಜಯ್ಗೆ ಅತ್ಯುತ್ತಮ ನಟ (ಕ್ರಿಟಿಕ್ಸ್) ಅವಾರ್ಡ್ ದೊರೆತಿದೆ. ‘ಕೃಷ್ಣಂ ಪ್ರಣಯ ಸಖಿ’ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಗಳಿಸಿದೆ.
ಕನ್ನಡಕ್ಕೆ ಬಂದ ಇತರ ಪ್ರಶಸ್ತಿಗಳು ಇಂತಿದೆ
ಅತ್ಯುತ್ತಮ ಸಂಗೀತ ಸಂಯೋಜನೆ: ಬಿ. ಅಜನೀಶ್ ಲೋಕನಾಥ್ (ಮ್ಯಾಕ್ಸ್)
ಅತ್ಯುತ್ತಮ ಹಾಸ್ಯನಟ: ಜಾಕ್ ಸಿಂಗಂ (ಭೀಮ)
ಅತ್ಯುತ್ತಮ ಚೊಚ್ಚಲ ನಿರ್ದೇಶಕ ಪ್ರಶಸ್ತಿ: ಸಂದೀಪ್ ಸುಂಕದ್ (ಶಾಖಾಹಾರಿ)
ಅತ್ಯುತ್ತಮ ಚೊಚ್ಚಲ ನಟ- ಸಮರ್ಜಿತ್ ಲಂಕೇಶ್ (ಗೌರಿ)
ಭರವಸೆ ಮೂಡಿಸಿದ ಹೊಸ ಪ್ರತಿಭೆ- ಸನ್ಯಾ ಅಯ್ಯರ್ (ಗೌರಿ)
ಅತ್ಯುತ್ತಮ ಚೊಚ್ಚಲ ನಟಿ – ಅಂಕಿತಾ ಅಮರ್ (ಇಬ್ಬನಿ ತಬ್ಬಿದಾ ಇಳೆಯಲಿ)
ಅತ್ಯುತ್ತಮ ಸಾಂಗ್ ಡಿಸೈನ್- ಇಮ್ರಾನ್ ಎಸ್ ಸರ್ಧಾರಿಯಾ
ಅತ್ಯುತ್ತಮ ಛಾಯಾಗ್ರಹಣ: ಶ್ರೀವತ್ಸನ್ ಸೆಲ್ವರಾಜನ್ (ಇಬ್ಬನಿ ತಬ್ಬಿದ ಇಳೆಯಲಿ)
ಅತ್ಯುತ್ತಮ ಹಿನ್ನೆಲೆ ಗಾಯಕಿ – ಐಶ್ವರ್ಯ ರಂಗರಾಜನ್
ಅತ್ಯುತ್ತಮ ಗಾಯಕ – ಜಸ್ಕರನ್
ಅತ್ಯುತ್ತಮ ಚಿತ್ರ ಸಾಹಿತಿ - ಡಾ. ವಿ. ನಾಗೇಂದ್ರ ಪ್ರಸಾದ್
Advertisement