
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ಎ ಆಗಿರುವ ದರ್ಶನ್ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಜೈಲಿನಲ್ಲಿದ್ದಾರೆ. ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾಗ ದರ್ಶನ್ ಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು.
ಜಾಮೀನಿನ ಬಳಿಕ ದರ್ಶನ್ ದಿ ಡೇವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಜಾಮೀನು ಪಡೆದು ವಿದೇಶಗಳಲ್ಲಿ ಮೋಜು ಮಸ್ತಿ ಮಾಡಿದ್ದ ವಿಡಿಯೋಗಳು ವೈರಲ್ ಆಗಿದ್ದವು. ಇನ್ನು ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ದರ್ಶನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಪಡೆದು ಇದೀಗ ಮೋಜು ಮಸ್ತಿ ಮಾಡುತ್ತಿದ್ದಾರೆ.
ವಿದೇಶಗಳಲ್ಲಿ ಪಾರ್ಟಿ ಮಾಡುತ್ತಿರುವ ವಿಡಿಯೋಗಳನ್ನು ಕರ್ನಾಟಕ ಪೊಲೀಸರ ಪರ ವಕೀಲರು ತೋರಿಸಿ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿದ್ದರು. ಈಗೇ ಹಲವಾರು ವಿಷಯಗಳನ್ನು ಗಮನಿಸಿದ ಸುಪ್ರೀಂ ಕೋರ್ಟ್ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು. ಹೀಗಾಗಿ ದರ್ಶನ್ ಅಂಡ್ ಗ್ಯಾಂಗ್ ಮತ್ತೆ ಜೈಲು ಸೇರಿತ್ತು.
ಜೈಲಿನಲ್ಲಿ ಮತ್ತೆ ದರ್ಶನ್ ಗೆ ಬೆನ್ನು ನೋವು ಕಾಣಿಸಿಕೊಂಡಿದ್ದು ಹಾಸಿಗೆ, ದಿಂಬು ನೀಡುವಂತೆ ಮನವಿ ಮಾಡಿದ್ದರು. ಇದೀಗ ದಿ ಡೇವಿಲ್ ಚಿತ್ರದ ಚಿತ್ರೀಕರಣದ ವೇಳೆ ದರ್ಶನ್ ಬೆನ್ನು ನೋವಿನಿಂದ ನೆಲದ ಮೇಲೆ ನೆರಳಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿದ್ದು ಇದೀಗ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಮರುಕ ಪಡುತ್ತಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಈ ವಿಡಿಯೋ ತೋರಿಸದ ದರ್ಶನ್ ಜೈಲಿಗೆ ಹೋದ ನಂತರ ಇದೀಗ ವಿಡಿಯೋ ಹರಿಬಿಟ್ಟು ಸಿನಿಮಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement