ದಕ್ಷಿಣ ಭಾರತದ ಸ್ಟಾರ್ ನಟ ಮೋಹನ್​​ಲಾಲ್​​ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, PM ಮೋದಿ ಅಭಿನಂದನೆ!

ಭಾರತೀಯ ಚಿತ್ರರಂಗಕ್ಕೆ ನೀಡುವ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ಅವರ ವೃತ್ತಿಜೀವನದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
Mohanlal-Narendra Modi
ಮೋಹನ್ ಲಾಲ್-ನರೇಂದ್ರ ಮೋದಿ
Updated on

ನವದೆಹಲಿ: ಭಾರತೀಯ ಚಿತ್ರರಂಗಕ್ಕೆ ನೀಡುವ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಘೋಷಿಸಲಾಗಿದೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ಅವರ ವೃತ್ತಿಜೀವನದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೋಹನ್ ಲಾಲ್ (Mohan Lal) ಮಲಯಾಳಂನಲ್ಲಿ ಮಾತ್ರವಲ್ಲದೆ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿಯೂ ತಮ್ಮ ನಟನಾ ಮಾಂತ್ರಿಕತೆಯನ್ನು ಹರಡಿದ್ದಾರೆ.

ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಪದ್ಮಭೂಷಣವನ್ನು ಮೋಹನ್ ಲಾಲ್ ಪಡೆದಿದ್ದಾರೆ. ನಟ ಮೋಹನ್ ಲಾಲ್ ಅವರಿಗೆ 2023ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. ಇದನ್ನು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವೆಂದು ಪರಿಗಣಿಸಲಾಗಿದೆ.

"ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಭಾರತ ಸರ್ಕಾರವು ಮೋಹನ್ ಲಾಲ್ ಅವರಿಗೆ 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಿದೆ. ಮೋಹನ್ ಲಾಲ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಈ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಭಾರತೀಯ ಚಿತ್ರರಂಗಕ್ಕೆ ನೀಡಿದ ಐತಿಹಾಸಿಕ ಕೊಡುಗೆಗಾಗಿ ಗೌರವಿಸಲಾಗುತ್ತಿದೆ. ಅವರ ಪ್ರತಿಭೆ, ಬಹುಮುಖ ನಟನಾ ಸಾಮರ್ಥ್ಯ ಮತ್ತು ಕಠಿಣ ಪರಿಶ್ರಮವು ಭಾರತೀಯ ಚಲನಚಿತ್ರ ಇತಿಹಾಸದಲ್ಲಿ ಸುವರ್ಣ ಮಾನದಂಡವನ್ನು ಸ್ಥಾಪಿಸಿದೆ" ಎಂದು ಸಚಿವಾಲಯ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಿದೆ.

2025ರ ಸೆಪ್ಟೆಂಬರ್ 23ರಂದು ನಡೆಯುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ಇದಕ್ಕೂ ಮೊದಲು, ಕಳೆದ ವರ್ಷ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಮೋಹನ್ ಲಾಲ್ ಈ ಗೌರವವನ್ನು ಸ್ವೀಕರಿಸುವುದು ಮಲಯಾಳಂ (Malayalam) ಚಿತ್ರರಂಗಕ್ಕೆ ಅಷ್ಟೇ ಅಲ್ಲ, ಇಡೀ ಭಾರತೀಯ ಚಲನಚಿತ್ರೋದ್ಯಮಕ್ಕೆ ಐತಿಹಾಸಿಕ ಕ್ಷಣವಾಗಿದೆ.

Mohanlal-Narendra Modi
ನಿರ್ಮಾಪಕರನ್ನು ದೋಚುವುದು ನಾಚಿಕೆಗೇಡು: 'Kalki 2' ಚಿತ್ರದಿಂದ Deepika Padukone ನಿರ್ಗಮಿಸಿದ ಬೆನ್ನಲ್ಲೇ Aamir Khan ಹೇಳಿಕೆ, Video ವೈರಲ್!

ಮೋಹನ್ ಲಾಲ್ ಗೆ ಅಭಿನಂದಿಸಿದ ಮೋದಿ

ನಟ ಮೋಹನ್ ಲಾಲ್ ಅವರು ಶ್ರೇಷ್ಠತೆ ಮತ್ತು ಬಹುಮುಖ ಪ್ರತಿಭೆಯ ಪ್ರತೀಕ. ದಶಕಗಳ ಕಾಲದ ಶ್ರೀಮಂತ ಕಾರ್ಯವೈಖರಿಯೊಂದಿಗೆ, ಅವರು ಮಲಯಾಳಂ ಸಿನಿಮಾ, ರಂಗಭೂಮಿಯ ಪ್ರಮುಖ ಜ್ಯೋತಿಯಾಗಿ ನಿಂತಿದ್ದಾರೆ. ಕೇರಳದ ಸಂಸ್ಕೃತಿಯ ಬಗ್ಗೆ ತೀವ್ರ ಒಲವು ಹೊಂದಿದ್ದಾರೆ. ಅವರು ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಸಿನಿಮೀಯ ಮತ್ತು ರಂಗಭೂಮಿ ಪ್ರತಿಭೆ ನಿಜಕ್ಕೂ ಸ್ಪೂರ್ತಿದಾಯಕವಾಗಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿ ಎಂದು ನರೇಂದ್ರ ಮೋದಿ (Narendra Modi) ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com