Bhavana Ramanna: ಐವಿಎಫ್ ಮೂಲಕ ಮಗು, ವಿನೂತನ ವಿಸ್ಮಯವನ್ನು ಹಂಚಿಕೊಂಡ ನಟಿ ಭಾವನಾ!
ಬೆಂಗಳೂರು: ಐವಿಎಫ್ ಮೂಲಕ ಮಗು ಪಡೆದುಕೊಂಡಿರುವ ಸ್ಯಾಂಡಲ್ ವುಡ್ ನ ನಟಿ ಭಾವನಾ ರಾಮಣ್ಣ ಮೊದಲ ಬಾರಿಗೆ ತನ್ನ ಮಗುವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಈ ಕುರಿತು ಇನ್ಸಾಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ಅವರು, ದೊಡ್ಡ ಮನೆ, ಪುಟ್ಟ ಕುಟುಂಬ. ನಾನು ಮತ್ತು ನನ್ನ ತಂದೆ, ಬೆಳದ್ದೆ ಎದ್ದು ಮನೆಯಂಗಳದಲ್ಲಿ ಕಾಫಿ ಹೀರುತ್ತಾ ಕೂತರೆ, ಇಲ್ಲಿ ಹಕ್ಕಿಗಳದ್ದೇ ನಾದ ನಿನಾದ... ಕು ಕು ಮೈನಾ, ಕಿಚಿ ಪಿಚಿ ಗುಬ್ಬಚ್ಚಿ, ನಿತ್ಯವೂ ಬರೀ ಹಕ್ಕಿಗಳದ್ದೇ ಕಲರವ. ಹಕ್ಕಿ ಪಿಕ್ಕಿಗಳ ಹಾಡು ಪಾಡು ಕೇಳುತ್ತಿದ್ದ ಮನೆಯಲ್ಲೀಗ ಹೊಸದೊಂದು ಪುಟ್ಟ ಹಕ್ಕಿಯ ಸರಿಗಮ ಎಂದಿದ್ದಾರೆ.
ಮನೆಯ ಗೂಡಲ್ಲಿ ಚುಯ್ ಚುಯ್ ಸದ್ದು ಮಾಡುತ್ತಿರುವ ಈ ಪುಟ್ಟ ಹಕ್ಕಿಗೆ ಏನೆಂದು ಹೆಸರಿಡುವುದು..? ನಮ್ಮನ್ನು ನಯವಾಗಿ ಬಂಧಿಸಿದ ಸುಂದರ ಬಲೆ, ಇದು ಹೊಸ ಪ್ರೀತಿಯ ಅಲೆ ತಂದುಕೊಟ್ಟಿದೆ. ಈ ವಿನೂತನ ವಿಸ್ಮಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.
ಐವಿಎಫ್ ತಂತ್ರಜ್ಞಾನದ ಮೂಲಕ ಅವಳಿ ಮಕ್ಕಳಿಗೆ ತಾಯಿಯಾಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡು ಸೀಮಂತ ಶಾಸ್ತ್ರ ಕೂಡಾ ಮಾಡಿಸಿಕೊಂಡಿದ್ದರು. ಆದರೆ ಹೆರಿಗೆ ವೇಳೆ ಒಂದು ಮಗು ಮೃತಪಟ್ಟಿದೆ ಎಂದು ಸುದ್ದಿಯಾಗಿತ್ತು. ಆದರೆ, ಈ ಬಗ್ಗೆ ಭಾವನಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ