
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ಮ್ಯಾಕ್ಸ್ ಮತ್ತು ಮಾರ್ಕ್ ಸಿನಿಮಾದ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ಕಿಚ್ಚ ಸುದೀಪ್ ಅವರು ಸ್ಕೋಡಾ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಸ್ಕೋಡಾ ಕಾರು ಸುಮಾರು ₹10 ಲಕ್ಷಕ್ಕೂ ಅಧಿಕ ಮೌಲ್ಯದ್ದಾಗಿದೆ. ಸುದೀಪ್ ತಮ್ಮ ಜೆಪಿ ನಗರದ ನಿವಾಸದಲ್ಲಿ ಉಡುಗೊರೆ ನೀಡಿದ್ದು, ಗಿಫ್ಟ್ ಪಡೆದ ನಿರ್ದೇಶಕ ಖುಷಿ ಪಟ್ಟಿದ್ದಾರೆ.
ಕಿಚ್ಚ ಸುದೀಪ್ ಅವರ ಜೊತೆಗೆ ಕ್ಲಿಕ್ಕಿಸಿಕೊಂಡ ಫೋಟೊವನ್ನು ನಿರ್ದೇಶಕ ವಿಜಯ್ ಕಾರ್ತಿಕೇಯ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ ಜೊತೆಗೆ ನಿರ್ದೇಶಕ, ಕಿಚ್ಚ ಸುದೀಪ್ ಹಾಗೂ ಅವರ ಕುಟುಂಬಕ್ಕೆ ಧನ್ಯವಾದ ತಿಳಿಸಿದ್ದಾರೆ.
ವಿಜಯ್ ಕಾರ್ತಿಕೇಯ ಅವರು ಕಳೆದ ವರ್ಷ ನಟ ಸುದೀಪ್ ಅವರ ಮ್ಯಾಕ್ಸ್ ಸಿನಿಮಾ ನಿರ್ದೇಶನ ಮಾಡಿದ್ದರು. ಆ ಸಿನಿಮಾ ಯಶಸ್ಸಿನ ಬಳಿಕ ಮಾರ್ಕ್ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ನಿರ್ದೇಶಕರ ಶ್ರಮಕ್ಕೆ ನಟ ಕಿಚ್ಚ ಸುದೀಪ್ ಅವರು ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ತಮ್ಮ ಆಪ್ತ ಸ್ನೇಹಿತರಿಗೆ, ನಿರ್ದೇಶಕರಿಗೆ, ನಟರಿಗೆ ಸುದೀಪ್ ಕಾರ್, ಜಾಕೆಟ್, ಕ್ರಿಕೆಟ್ ಬ್ಯಾಟ್, ವಾಚ್ ಮುಂತಾದ ವಸ್ತುಗಳನ್ನ ಗಿಫ್ಟ್ ನೀಡುತ್ತಲೇ ಇರುತ್ತಾರೆ.
Advertisement