
ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ನಿರ್ಮಿಸಿದ 'ಸು ಫ್ರಮ್ ಸೋ' ಚಿತ್ರದ ಅದ್ಭುತ ಯಶಸ್ಸಿನ ನಂತರ, ನಟ ತಮ್ಮ ಮುಂದಿನ ಚಿತ್ರದ ನಿರ್ದೇಶನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ ಅವರು ಮೊದಲ ಬಾರಿಗೆ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಮತ್ತು ಇದು ಕನ್ನಡದಲ್ಲಿ ನಿರ್ಮಾಣವಾಗಲಿದೆ. ಸದ್ಯಕ್ಕೆ ರಾಜ್ ಬಿ ಶೆಟ್ಟಿ ಅವರು ಸಂಪೂರ್ಣವಾಗಿ ಬರವಣಿಗೆಯ ಪ್ರಕ್ರಿಯೆಗೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ.
ರಾಜ್ ಬಿ ಶೆಟ್ಟಿ ಅವರು 2026 ರ ಜನವರಿ ಅಥವಾ ಫೆಬ್ರುವರಿಯಲ್ಲಿ ಚಿತ್ರೀಕರಣ ಪ್ರಾರಂಭಿಸಲು ಯೋಜಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಚಿತ್ರದಲ್ಲಿ ತಾವು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದರೂ, ಇತರ ಪ್ರಮುಖ ಪಾತ್ರಗಳನ್ನು ನಿರ್ವಹಿಸಲು ನಟರನ್ನು ಹುಡುಕುತ್ತಿದ್ದಾರೆ. ಒಂದು ಮೊಟ್ಟೆಯ ಕಥೆಯಿಂದ ಹಿಡಿದು ಗರುಡ ಗಮನ ವೃಷಭ ವಾಹನದವರೆಗೆ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಹಾಗೆಯೇ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಟೋಬಿ ಮತ್ತು ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಗಳಿಗೆ ರಾಜ್ ಆ್ಯಕ್ಷನ್ ಕಟ್ ಹೇಳಿದ್ದರು.
100 ಕೋಟಿ ರೂ.ಗು ಅಧಿಕ ಗಳಿಕೆ ಕಂಡ ಸು ಫ್ರಮ್ ಸೋ ಚಿತ್ರವು ವಿಮರ್ಶಾತ್ಮಕವಾಗಿ ಮತ್ತು ವಾಣಿಜ್ಯಿಕ ಯಶಸ್ಸನ್ನು ಗಳಿಸಿಕೊಟ್ಟಿತು. ಈಮಧ್ಯೆ, ಅವರು ಅರ್ಜುನ್ ಜನ್ಯ ನಿರ್ದೇಶನದ ಮತ್ತು ರಮೇಶ್ ರೆಡ್ಡಿ ನಿರ್ಮಿಸಿರುವ ಹೈ ಪ್ರೊಫೈಲ್ ಯೋಜನೆಯಾದ 45 ನಲ್ಲಿಯೂ ನಟಿಸಿದ್ದಾರೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಮತ್ತು ಉಪೇಂದ್ರ ಅವರೊಂದಿಗೆ ಮೊದಲ ಬಾರಿಗೆ ಪರದೆ ಹಂಚಿಕೊಂಡಿಲಿದ್ದಾರೆ. ಹೆಚ್ಚುವರಿಯಾಗಿ, ಅವರು ಮತ್ತೊಂದು ಚಿತ್ರದಲ್ಲಿಯೂ ನಟಿಸುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.
Advertisement