ಅನಿರುದ್ದ್ ರವಿಚಂದ್ರನ್ ಜೊತೆ ಹಸೆಮಣೆ ಏರಲು ಸಜ್ಜಾದ ಕಾವ್ಯಾ ಮಾರನ್: ನವೆಂಬರ್ ನಲ್ಲಿ ಅದ್ದೂರಿ ಡೆಸ್ಟಿನೇಷನ್ ವೆಡ್ಡಿಂಗ್!

ಮದುವೆ ಶೀಘ್ರದಲ್ಲೇ ನಡೆಯಲಿದೆ ಎಂದು ಸುಳಿವು ನೀಡಿದ್ದಾರೆ. ಇದರಿಂದಾಗಿ ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಈ ಮದುವೆ ವದಂತಿಗೆ ಮತ್ತೆ ಜೀವ ಬಂದಂತಾಗಿದೆ.
Anirudh Ravichander and Kavya Maran
ಅನಿರುದ್ಧ್ ರವಿಚಂದ್ರನ್ ಮತ್ತು ಕಾವ್ಯಾ ಮಾರನ್
Updated on

ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹ-ಒಡತಿ ಕಾವ್ಯಾ ಮಾರನ್ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.

ಕಳೆದ ಎರಡು ವರ್ಷಗಳಿಂದ ಅನಿರುದ್ಧ್‌ - ಕಾವ್ಯಾ ರಿಲೇಷನ್‌ಶಿಪ್‌ನಲ್ಲಿದ್ದಾರೆ ಎನ್ನುವ ಸುದ್ದಿ ಕಾಲಿವುಡ್‌ - ಟಾಲಿವುಡ್‌ ವಲಯದಲ್ಲಿ ಭಾರೀ ಸದ್ದು ಮಾಡಿದೆ. ಇದೀಗ ಇಬ್ಬರು ಮದುವೆ ಆಗಲಿರುವ ಡೇಟ್‌ ಕೂಡ ಹರಿದಾಡಿದೆ. ಸದ್ಯ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಈ ಜೋಡಿ ನವೆಂಬರ್ 10 ರಂದು ಗ್ರೀಸ್‌ನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳಲು ಯೋಜನೆ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಅನಿರುದ್ಧ್ ಅವರ ಚಿಕ್ಕಪ್ಪ ಹಾಗೂ ಹಿರಿಯ ನಟ ವೈ. ಜಿ. ಮಹೇಂದ್ರನ್ ಅವರು ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಮದುವೆ ಶೀಘ್ರದಲ್ಲೇ ನಡೆಯಲಿದೆ ಎಂದು ಸುಳಿವು ನೀಡಿದ್ದಾರೆ. ಇದರಿಂದಾಗಿ ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಈ ಮದುವೆ ವದಂತಿಗೆ ಮತ್ತೆ ಜೀವ ಬಂದಂತಾಗಿದೆ.

ಅನಿರುದ್ಧ್ ಮತ್ತು ಕಾವ್ಯ ಮಾರನ್ ಪ್ರೀತಿಯಲ್ಲಿದ್ದಾರೆ ಎಂಬ ವರದಿಗಳು ಕಳೆದ ಒಂದು ವರ್ಷದಿಂದ ಹರಿದಾಡುತ್ತಿವೆ. ಈ ಹಿಂದೆ ಅನಿರುದ್ಧ್ ಈ ರೀತಿಯ ಸುದ್ದಿಗಳನ್ನು ನಿರಾಕರಿಸಿದ್ದರು. ಆದರೆ ಈಗ ಗ್ರೀಸ್‌ನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆಯಲಿದೆ ಎಂಬ ಸುದ್ದಿ ಮತ್ತೆ ಕಾಡ್ಗಿಚ್ಚಿನಂತೆ ಹರಡುತ್ತಿದೆ.

Anirudh Ravichander and Kavya Maran
ಅನಿರುದ್ಧ್ ರವಿಚಂದರ್ ಜೊತೆ ಮದುವೆ ವದಂತಿ; ಕೊನೆಗೂ ಮೌನ ಮುರಿದ ಸನ್‌ರೈಸರ್ಸ್ ಹೈದರಾಬಾದ್ ಒಡತಿ ಕಾವ್ಯಾ ಮಾರನ್!

ಇಬ್ಬರ ಕಡೆಯಿಂದ ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಿದ್ದಿಲ್ಲ. ಕಾವ್ಯ ಮಾರನ್ ಐಪಿಎಲ್ ಮೂಲಕ ದೇಶಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಅವರು ಸನ್ ಟಿವಿ ಮಾಲೀಕ ಕಲಾನಿಧಿ ಮಾರನ್ ಅವರ ಪುತ್ರಿಯಾಗಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com