ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ; ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ!

ಕನ್ನಡದ ಸ್ಟಾರ್ ಒಬ್ಬರು ಈ ಪ್ರತಿಷ್ಠಿತ ಪಟ್ಟಿಯಲ್ಲಿ ಸ್ಥಾನ ಪಡೆದು ಹೊಸ ದಾಖಲೆ ಸೃಷ್ಟಿಸಿದ್ದಾರೆ.
Rishab shetty
ರಿಷಬ್ ಶೆಟ್ಟಿ
Updated on

ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ನಿಯತಕಾಲಿಕೆಯ ‘ಶೋಸ್ಟಾಪರ್ಸ್ 2026’ ವಿಶೇಷ ಆವೃತ್ತಿಯಲ್ಲಿ ಭಾರತದ ಪ್ರಮುಖ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಸ್ಥಾನ ಪಡೆದಿದ್ದಾರೆ.

ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸೃಷ್ಟಿಯಾದ ಅಭೂತಪೂರ್ವ ಯಶಸ್ಸು ಮತ್ತು ಅವರ ಸಿನಿಮಾಗಳ ಪ್ರಭಾವವೇ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ.

ನಟ, ನಿರ್ದೇಶಕ ಹಾಗೂ ಬರಹಗಾರ—ಈ ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ ಎಂಬ ಗೌರವಕ್ಕೆ ರಿಷಬ್ ಶೆಟ್ಟಿ ಪಾತ್ರರಾಗಿದ್ದಾರೆ. ಕನ್ನಡದ ಹೆಮ್ಮೆಯ ಸ್ಟಾರ್ ಒಬ್ಬರು ಈ ಪ್ರತಿಷ್ಠಿತ ಪಟ್ಟಿಯಲ್ಲಿ ಸ್ಥಾನ ಪಡೆದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

Rishab shetty
'ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು': ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

ಹೊಂಬಾಳೆ ಫಿಲ್ಮ್ಸ್ ಲಾಂಛನದಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಪ್ರೀಕ್ವೆಲ್ ಕಾಂತಾರ: ಚಾಪ್ಟರ್ 1(Kantara: A Legend Chapter-1) ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಂಡು 800 ಕೋಟಿ ರೂ.ಗೂ ಅಧಿಕ ಗಳಿಕೆ ಮಾಡಿತ್ತು. ಈ ಮೂಲಕ 2025ರ ಸಾಲಿನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಪ್ರಮುಖ ಭಾರತೀಯ ಚಿತ್ರವಾಗಿ ಹೊರಹೊಮ್ಮಿತ್ತು. ಅಲ್ಲದೆ ದೊಡ್ಡ ಬಜೆಟ್‌ನ ಬಾಲಿವುಡ್ ಚಿತ್ರ ‘ಛಾವಾ’ದ ಗಳಿಕೆಯನ್ನೂ ಹಿಂದಿಕ್ಕಿ ಮುನ್ನಡೆ ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com