ದುನಿಯಾ ವಿಜಯ್, ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿದ್ದರಾಮಯ್ಯ!

ದುನಿಯಾ ವಿಜಯ್ ಮತ್ತು ನಟಿ ರಚಿತಾ ರಾಮ್ ನಟಿಸಿರುವ ಚಿತ್ರವು ಜನವರಿ 23ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದು, ಎಲ್ಲೆಡೆ ಸಕಾರಾತ್ಮಕ ಪ್ರತಿಕ್ರಿಯೆ ಪಡೆದಿದೆ.
Landlord cinema Still
ಲ್ಯಾಂಡ್ ಲಾರ್ಡ್ ಸಿನಿಮಾ ಸ್ಟಿಲ್
Updated on

ಬೆಂಗಳೂರು: ಜಡೇಶ್ ಕೆ ಹಂಪಿ ನಿರ್ದೇಶನದಲ್ಲಿ ಮೂಡಿಬಂದಿರುವ ‘ಲ್ಯಾಂಡ್‌ಲಾರ್ಡ್’ ಚಿತ್ರ ತೆರೆಕಂಡಿದ್ದು, ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.

ದುನಿಯಾ ವಿಜಯ್ ಮತ್ತು ನಟಿ ರಚಿತಾ ರಾಮ್ ನಟಿಸಿರುವ ಚಿತ್ರವು ಜನವರಿ 23ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದು, ಎಲ್ಲೆಡೆ ಸಕಾರಾತ್ಮಕ ಪ್ರತಿಕ್ರಿಯೆ ಪಡೆದಿದೆ.

ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆಯ ವಿಷಯಾಧಾರಿತ ದುನಿಯಾ ವಿಜಯ್ ನಟನೆಯ 'ಲ್ಯಾಂಡ್ ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್‌ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದು ಅವರು ಹೇಳಿದ್ದಾರೆ.

Landlord cinema Still
ಲ್ಯಾಂಡ್ ಲಾರ್ಡ್ ಚಿತ್ರದ ಟ್ರೈಲರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com