

ಬೆಂಗಳೂರು: ನಿರ್ಮಾಪಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಮ್ಯಾನೇಜರ್ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿರ್ಮಾಪಕ ಕೆ.ಮಂಜು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾನಹಾನಿ, ಬೆದರಿಕೆ, ಶಾಂತಿಭಂಗ ಉಂಟುಮಾಡುವ ಆರೋಪದಡಿ ಬಿಎನ್ ಎಸ್ ಸೆಕ್ಷನ್ 351, 352 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕನ್ನಡ ಚಿತ್ರ ನಿರ್ಮಾಪಕರ ಪರವಾಗಿ ನಿರ್ಮಾಪಕ ಕೆ.ಮಂಜು ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರಂಭದಲ್ಲಿ ಪೊಲೀಸರು NCR ದಾಖಲಿಸಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಚಂದ್ರಚೂಡ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡುತ್ತಾರೆ ಎಂದು ಚಕ್ರವರ್ತಿ ಚಂದ್ರಚೂಡ್ ನೀಡಿದ್ದ ಹೇಳಿಕೆ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿತ್ತು.
ವಿವಾದದ ಬೆನ್ನಲ್ಲೇ ಸ್ಪಷ್ಟೀಕರಣ ನೀಡಿದ ಚಂದ್ರಚೂಡ್
ನಾನು ಮಾತನಾಡಿರುವುದು ತಮಿಳು ಚಿತ್ರರಂಗದ ಬಗ್ಗೆ ಅಲ್ಲಿಯ ವಾತಾವರಣದ ಬಗ್ಗೆ ಅಲ್ಲಿನ ರಾಜಕೀಯ ವ್ಯವಸ್ಥೆಯ ಬಗ್ಗೆ ಹೊರತು ಕನ್ನಡ ನಿರ್ಮಾಪಕರ ಬಗ್ಗೆ ಆಗಲಿ ಕನ್ನಡ ಚಿತ್ರರಂಗದ ಬಗ್ಗೆ ಅಲ್ಲವೇ ಅಲ್ಲ. ಅಲ್ಲದೆ "ಕಮೋಡ್ ಟು ಕಾಂಡೋಮ್ "ಅನ್ನುವ ಉಪಮೆಯನ್ನು ಬಳಸಿದ್ದೇನೆ ಅಷ್ಟೇ ವಿನಃ ಯಾವುದೇ ನಿರ್ಮಾಪಕರ ವಿರುದ್ಧ ಅಲ್ಲ. ಜೊತೆಗೆ ಒಬ್ಬ ಕನ್ನಡ ನಿರ್ಮಾಪಕ ತಮಿಳು ರಾಜಕೀಯಕ್ಕೆ ಹೇಗೆ ಸಿಲುಕಿದ್ದಾರೆ ಎಂಬ ಹಿನ್ನೆಲೆಯಲ್ಲೂ ಸಹ ದನಿ ಎತ್ತಿದ್ದೇನೆ. ತಮಿಳು ಚಿತ್ರರಂಗದಲ್ಲಿಯೂ ಕೆಲಸ ಮಾಡಿದ ಅನುಭವ ಇರುವುದರಿಂದ ಅಲ್ಲಿ ನಾಯಕ ಕೇಂದ್ರೀತ ವಾತಾವರಣ ಹೇಗಿದೆ ಮತ್ತು ಅದರ ಪರಿಣಾಮಗಳನ್ನು ವಿವರಿಸಿದ್ದೇನೆ. ಅಖಾಡ videoದ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದೆ ಒಂದು ಭಾಗವನ್ನು ಮಾತ್ರ ಕತ್ತರಿಸಿ ವೈರಲ್ ಮಾಡುತ್ತಿರುವುದು ಈ ಪ್ರಮಾದ. ಯಾವುದೇ ನಿರ್ಮಾಪಕರು ಇದರಿಂದ ನೊಂದುಕೊಳ್ಳುವ ಅವಶ್ಯಕತೆಯೂ ಇಲ್ಲ ಎಂದು ಚಂದ್ರಚೂಡ್ ತಿಳಿಸಿದ್ದಾರೆ.
Advertisement