

ಹುಬ್ಬಳ್ಳಿ: 'ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ' ಎಂಬರ್ಥ ಬರೋ ರೀತಿಯಲ್ಲಿ ಬಾಲಿವುಡ್ ಗಾಯಕ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಅದರ ಬೆನ್ನಲ್ಲೇ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು. ಇದೀಗ ಸೋನು ನಿಗಮ್ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದ ಸೋನು ನಿಗಮ್, ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಿದರು. ಅಲ್ಲದೆ ಗದ್ದುಗೆ ಬಳಿ 10 ನಿಮಿಷ ಧ್ಯಾನ ಮಾಡಿದರು. ನಂತರ ಮಠದ ಟ್ರಸ್ಟ್ ವತಿಯಿಂದ ಸಿದ್ಧಾರೂಢರ ಮೂರ್ತಿ ನೀಡಿ ಸೋನು ನಿಗಮ್ ಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸಂಗೀತ ಕಾರ್ಯಕ್ರಮಕ್ಕಾಗಿ ಸೋನು ನಿಗಮ್ ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದರು.
Advertisement