ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
joe simon
ಜೋಸೈಮನ್
Updated on

ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ ಉಪಕಾರಿ, ನನ್ನ ರೋಷ ನೂರು ವರುಷ ಮುಂತಾದ ಚಿತ್ರಗಳನ್ನು ಜೋ ಸೈಮನ್ ನಿರ್ದೇಶಿಸಿದ್ದಾರೆ.

joe simon
'ಟೀಸರ್ ನೋಡಿ ಯಾವುದೇ ನಿರ್ಧಾರಕ್ಕೆ ಬರಬೇಡಿ': ಯಶ್ ನಟನೆಯ ಟಾಕ್ಸಿಕ್ ಚಿತ್ರದ ಬಗ್ಗೆ ಕೆಎಫ್‌ಸಿಸಿ ಅಧ್ಯಕ್ಷೆ ಡಾ. ಜಯಮಾಲಾ

ಮೂಲತಃ ಮಂಡ್ಯ ಮೂಲದ ಜೋ ಸೈಮನ್ ಅವರು, 1946ರಲ್ಲಿ ಜನಿಸಿದ್ದರು. 1967ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅವರು, ಕೆಎಸ್ಆರ್ ದಾಸ್, RN ಜಯಗೋಪಾಲ್, ಕಣಗಾಲ್ ಪ್ರಭಾಕರ ಶಾಸ್ತ್ರಿ, ಎಸ್.ವಿ ರಾಜೇಂದ್ರ ಸಿಂಗ್ ಬಾಬು ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದರು. ನಂತರ 1977ರಲ್ಲಿ ಒಂದು ಪ್ರೇಮದ ಕಥೆ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶರಾಗಿದ್ದು ನಂತರ ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆಯೇ ಅಂತ್ಯ ಸಂಸ್ಕಾರ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com