ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿಯಲ್ಲಿ ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; FIR ದಾಖಲು

ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ಈ ವಿಡಿಯೋ ರೆಕಾರ್ಡ್‌ ಮಾಡಲಾಗಿದೆ. ನಟಿ ಬಾತ್‌ರೂಮ್‌ನಲ್ಲಿದ್ದಾಗ ಅಪರಿಚಿತ ಈ ವಿಡಿಯೋ ಮಾಡಿದ್ದಾನೆ.
File image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕನ್ನಡ ನಟಿಯೊಬ್ಬರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಾಗಿದೆ.

ಫೆಬ್ರವರಿ 7 ರಂದು ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ನಟಿ ಭಾಗವಹಿಸಿದ್ದರು. ನಟಿ ಬಾತ್‌ರೂಮ್‌ನಲ್ಲಿದ್ದಾಗ ಅಪರಿಚಿತ ಈ ವಿಡಿಯೋ ಮಾಡಿದ್ದಾನೆ.

ಬಳಿಕ Swan.3704722 ಇನ್ಸ್ಟಾ ಅಕೌಂಟ್‌ನಿಂದ ಆಕೆಯ ಸ್ನೇಹಿತೆಯ ಅಕೌಂಟ್‌ಗೆ ನಾಲ್ಕಾರು ವೀಡಿಯೋಗಳನ್ನು ಕಳಿಸಿದ್ದ. ವಿಡೀಯೋ ಪಬ್ಲಿಕ್ ಮಾಡಬಾರದೆಂದರೆ ಇಂತಿಷ್ಟು ಹಣ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

ವಿಡಿಯೋ ಕಾಲ್ ಮಾಡುವ ಮೂಲಕ ಮೂರ್ನಾಲ್ಕು ಬಾರಿ ಬ್ಲಾಕ್‌ಮೇಲ್‌ ಮಾಡಿದ್ದಾನೆ. ಹಣ ನೀಡದೇ ಹೋದ್ರೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಸಿಟಿ ಸೆನ್ ಪೊಲೀಸ್‌ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.

File image
ಬೆಂಗಳೂರು: ತಾಯಿಯ ಖಾಸಗಿ ಫೋಟೋ ತೆಗೆದು ಲವರ್ ಗೆ ಕಳುಹಿಸಿದ ಮಗಳು! ದೂರು ದಾಖಲು

ಈ ಸಂಬಂಧ ಸಂತ್ರಸ್ತೆ ದೂರು ದಾಖಲು ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿ ಈ ಕೃತ್ಯ ನಡೆಸಿದ್ದು, ಆತನಿಗಾಗಿ ಹುಡುಕಾಟ ಮುಂದುವರಿದಿದೆ.

ದೂರಿನ ಅನ್ವಯ ಆರೋಪಿ ವಿರುದ್ಧ ಐಟಿ ಆಕ್ಟ್ ಮತ್ತು ಬಿಎನ್‌ಎಸ್ 77, 351 ಮತ್ತು 308 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com