Toxic Movie: ಟಾಕ್ಸಿಕ್ ಟೀಸರ್​​ಗೆ ಮುಹೂರ್ತ ಫಿಕ್ಸ್..!

ಇತ್ತೀಚೆಗೆ (ಜ.8) ಟಾಕ್ಸಿಕ್ ಸಿನಿಮಾದಲ್ಲಿ ಯಶ್‌ ಪಾತ್ರದ ಹೆಸರನ್ನು ವಿಡಿಯೊ ಮೂಲಕ ಬಿಡುಗಡೆ ಮಾಡಿದ್ದರು.
A still from a movie
ಚಿತ್ರದ ಸ್ಟಿಲ್
Updated on

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಮತ್ತೊಂದು ಟೀಸರ್ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ.

2026 ಮಾರ್ಚ್ 19ರಂದು ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ಫೆಬ್ರವರಿ 20ರಂದು ಚಿತ್ರದ ಮತ್ತೊಂದು ಟೀಸರ್ ಬಿಡುಗಡೆಯಾಗಲಿದೆ.

ಈ ಬಗ್ಗೆ ಚಿತ್ರದ ನಿರ್ದೇಶಕಿ ಗೀತು ಮೋಹನ್ ದಾಸ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆ ಬೆಳಿಗ್ಗೆ 9:35ಕ್ಕೆ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ (ಜ.8) ಟಾಕ್ಸಿಕ್ ಸಿನಿಮಾದಲ್ಲಿ ಯಶ್‌ ಪಾತ್ರದ ಹೆಸರನ್ನು ವಿಡಿಯೊ ಮೂಲಕ ಬಿಡುಗಡೆ ಮಾಡಿದ್ದರು. ಕೇವಲ 2.51 ನಿಮಿಷಗಳ ವಿಡಿಯೊ ವೀಕ್ಷಿಸಿದ ಅಭಿಮಾನಿಗಳು ದಂಗಾಗಿದ್ದರು. ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದರು.

ಆ ವಿಡಿಯೊ ಬಿಡುಗಡೆಯಾದ ಬಳಿಕ 'ಆಕ್ಷೇಪಾರ್ಹ ದೃಶ್ಯ' ಹೊಂದಿದೆ ಎಂದು ಸಾಮಾಜಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಗೆ ಒಳಗಾಗಿತ್ತು. ಇದೀಗ ಸಿನಿಮಾದ ಮತ್ತೊಂದು ಟೀಸರ್ ನಾಳೆ ಬೆಳಿಗ್ಗೆ ಬಿಡುಗಡೆಯಾಗಲಿದ್ದು, ಅಭಿಮಾನಿಗಳು, ಸಿನಿ ಪ್ರಿಯರಲ್ಲಿ ಕುತೂಹಲ ಹೆಚ್ಚಾಗಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ನಾಯಕ ನಟನಾಗಿ ಅಭಿನಯಿಸಿದ್ದು, ಗೀತು ಮೋಹನ್​ದಾಸ್ ಅವರು ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ.

A still from a movie
'ಟೀಸರ್ ನೋಡಿ ಯಾವುದೇ ನಿರ್ಧಾರಕ್ಕೆ ಬರಬೇಡಿ': ಯಶ್ ನಟನೆಯ ಟಾಕ್ಸಿಕ್ ಚಿತ್ರದ ಬಗ್ಗೆ ಕೆಎಫ್‌ಸಿಸಿ ಅಧ್ಯಕ್ಷೆ ಡಾ. ಜಯಮಾಲಾ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com