

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್ ಬಿಡುಗಡೆ ನಂತರ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಟೀಸರ್‌ನಲ್ಲಿ ಅಸಭ್ಯ ದೃಶ್ಯಗಳಿವೆ, ಅದು ಮಕ್ಕಳ ಮೇಲೆ ಪರಿಣಾಮ ಬೀರಬಹುದು, ಫ್ಯಾಮಿಲಿ ಜೊತೆ ಕುಳಿತು ನೋಡುವಂತೆ ಟೀಸರ್ ಇಲ್ಲ ಎಂಬಿತ್ಯಾದಿ ಮಾತುಗಳು ಸಾಕಷ್ಟು ಕೇಳಿಬಂದಿದ್ದು, ನಿರ್ದೇಶಕಿ ಗೀತು ಮೋಹನ್ ದಾಸ್ ಹಾಗೂ ನಟ ಯಶ್ ಗೆ ಸಿಕ್ಕಾಪಟ್ಟೆ ಜನ ಬೈಯುತ್ತಿದ್ದಾರೆ.
ದೂರು ದಾಖಲು
ಈ ಸಂಬಂಧ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಕೂಡ ಸಲ್ಲಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಲೋಹಿತ್ ಕುಮಾರ್, ಟೀಸರ್‌ನಲ್ಲಿ ಕಂಡುಬಂದ ದೃಶ್ಯಗಳನ್ನು ಗಮನಿಸಿದರೆ ಈ ಚಿತ್ರವು ಕುಟುಂಬ ಸದಸ್ಯರೊಂದಿಗೆ ನೋಡಲು ಸೂಕ್ತವಲ್ಲ.
ಚಿತ್ರಮಂದಿರಗಳಲ್ಲಿ ಎ ಸರ್ಟಿಫಿಕೇಟ್ ಇದ್ದರೆ ಮಕ್ಕಳು ಕರೆದುಕೊಂಡು ಫ್ಯಾಮಿಲಿ ಆಡಿಯನ್ಸ್ ನೋಡಲು ಸಾಧ್ಯವಿಲ್ಲ. ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಟೀಸರ್‌ಗಳಿಗೆ ಯಾವುದೇ ಮಾರ್ಗಸೂಚಿಗಳಿಲ್ಲದಿರುವುದು ಸಮಸ್ಯೆಯಾಗಿದೆ ಎಂದು ತಿಳಿಸಿದರು. ಸೆನ್ಸಾರ್ ಮಂಡಳಿ ಟೀಸರ್‌ಗಳಿಗೂ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ದೂರು ಸಲ್ಲಿಸಿದ್ದೇನೆ ಎಂದರು.
Advertisement