

ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಈ ಹಿಂದೆ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮೂವರೂ ಒಬ್ಬರಿಗೊಬ್ಬರು ಪರಸ್ಪರ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾ, ಪ್ರೀತಿಯ ಮಾತುಗಳನ್ನು ಆಡುತ್ತಾ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುತ್ತಾ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದರು.
ಆದರೆ ಕಾಂತಾರ ಚಾಪ್ಟರ್ 1, ಸು ಫ್ರಮ್ ಸೋ ಅಥವಾ 45 ಚಿತ್ರ ಬಿಡುಗಡೆಯಾದಾಗಲೂ ಮೂವರೂ ಒಬ್ಬರಿಗೊಬ್ಬರು ಬೆನ್ನುತಟ್ಟಲು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದರಿಂದ ಏನೋ ಗುಸುಗುಸು ಹಬ್ಬಿತ್ತು.
ರಕ್ಷಿತ್ ಶೆಟ್ಟಿಯವರು ರನ್ ಆಂಟನಿ ಚಿತ್ರದ ಕಥೆ ಬರೆದುಕೊಂಡು ಅಮೆರಿಕದಲ್ಲಿ ಕುಳಿತಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ.
ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುವ ನೇಮೋತ್ಸವ ಇದು. ಅಲೆವೂರು ದೊಡ್ಡಮನೆ ಕುಟುಂಬದ ಕುಡಿ ಆಗಿರುವ ರಕ್ಷಿತ್ ಶೆಟ್ಟಿ ಅವರು ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಬಹಳ ಹೊತ್ತು ನೇಮೋತ್ಸವದಲ್ಲಿ ಕುಳಿತ ಬಳಿಕ ರಕ್ಷಿತ್ ಶೆಟ್ಟಿ ನಂತರ ವಾಪಸ್ಸಾದರು.
Advertisement