

ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಈ ಭಾನುವಾರ ನಡೆಯಲಿದೆ. ಮೀಡ್ ವೀಕ್ ನಲ್ಲಿ ಯಾರು ಹೊರಗೆ ಬರುತ್ತಾರೆ ಎಂಬ ಕುತೂಹಲವು ಕೆರಳಿಸಿದೆ. ಇನ್ನು ಈ ಬಾರಿ ಟ್ರೋಫಿ ಯಾರು ಗೆಲ್ಲುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣ ಗೌಡರು, Biggboss ನಿರೂಪಕ, ನಟ ಸುದೀಪ್ ನಿವಾಸಕ್ಕೆ ಭೇಟಿ ನೀಡಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬಿಗ್‌ಬಾಸ್ ಸ್ಪರ್ಧಿಯಾಗಿರುವ ಅಶ್ವಿನಿ ಗೌಡ ಸಹ ಕನ್ನಡ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ಇನ್ನು ಅಶ್ವಿನಿ ಗೌಡ ನಾರಾಯಣ ಗೌಡರ ಶಿಷ್ಯೆ ಎಂದು ಹೇಳಲಾಗುತ್ತಿದೆ. ಇನ್ನು ಫಿನಾಲೆ ಹಂತದಲ್ಲಿರುವ ಸ್ಪರ್ಧಿಗಳಿಗೆ ಮೂರು ಆಸೆಗಳನ್ನು ಕೋರಿಕೊಳ್ಳಲು ಅವಕಾಶ ನೀಡಲಾಗಿತ್ತು. ಅದರಂತೆ ಅಶ್ವಿನಿಗೌಡ ಬಿಗ್‌ಬಾಸ್ ಮನೆಯಲ್ಲಿ ನಾರಾಯಣ ಗೌಡರನ್ನು ನೋಡಬೇಕು. ಅವರ ಅಶೀರ್ವಾದ ಪಡೆದುಕೊಳ್ಳಬೇಕು ಎಂದು ಹೇಳಿದ್ದರು.
ಇದೀಗ ಸುದೀಪ್ ಅವರನ್ನು ನಾರಾಯಣಗೌಡರು ಭೇಟಿಯಾಗಿದ್ದಾರೆ. ನಾರಾಯಣ ಗೌಡ್ರು ತಮ್ಮ ಪುತ್ರನ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಲು ಸುದೀಪ್ ನಿವಾಸಕ್ಕೆ ತೆರಳಿದ್ದು ಮಗನ ಮದುವೆಗೆ ಆಹ್ವಾನಿಸಿದ್ದಾರೆ.
Advertisement