

ಬೆಂಗಳೂರು: ಬೆಳ್ಳಿತೆರೆ ಮತ್ತು ಕಿರುತೆರೆ ಎರಡರಲ್ಲೂ ಕೆಲಸ ಮಾಡಿ ಜನಪ್ರಿಯತೆ ಗಳಿಸಿರುವ ನಟಿ ಕಾರುಣ್ಯ ರಾಮ್ ಅವರು ಇದೀಗ ಸ್ವಂತ ತಂಗಿಯ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ಕಾರುಣ್ಯ ರಾಮ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತಮ್ಮ ಸಹೋದರಿ, ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ದೂರು ನೀಡಿದ್ದಾರೆ.
ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಆಡಿ ಸುಮಾರು ರೂ.25 ಲಕ್ಷ ಸಾಲ ಮಾಡಿಕೊಂಡಿದ್ದಾರೆ. ಸಾಲ ತೀರಿಸಲು ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಕಾರುಣ್ಯ ಉಲ್ಲೇಖಿಸಿದ್ದಾರೆ.
ಈ ಹಿಂದೆಯೇ ಕಾರುಣ್ಯ ರಾಮ್ ಅವರು ಸಮೃದ್ಧಿ ವಿರುದ್ಧ ನೀಡಿದ್ದ ದೂರು ಆಧರಿಸಿ ಆರ್.ಆರ್. ನಗರ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು. ಇದೀಗ ವಂಚನೆ, ಬೆದರಿಕೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.
Advertisement