

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಕುರಿತಂತೆ 2ನೇ ರನ್ನರ್ ಅಪ್ ಅಶ್ವಿನಿ ಗೌಡ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡವ ಎಂಬ ಟ್ರಂಪ್ ಕಾರ್ಡ್ ಬಳಸಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದ ಅಶ್ವಿನಿ ಇದೀಗ ಶಾಕಿಂಗ್ ಹೇಳಿಕೆ ನೀಡಿದ್ದಾರೆ. BBK 12ರ ಒಟ್ಟಾರೆ ವೋಟ್ ನಂಬರ್ ಆಚೆ ಬಂದರೆ ನಾನೇ ವಿನ್ನರ್ ಎಂದು ಅಶ್ವಿನಿ ಗೌಡ ಸವಾಲು ಹಾಕಿದ್ದಾರೆ. ಗಿಲ್ಲಿಯನ್ನು ವಿನ್ನರ್ ಎಂದು ಒಪ್ಪಿಕೊಳ್ಳಲು ಅಶ್ವಿನಿ ಸಿದ್ಧವಾಗಿಲ್ಲ. ನನಗೂ, ಗಿಲ್ಲಿಗೂ ಬಂದ ಮತಗಳ ಮಧ್ಯೆ ಅಜಗಜಾಂತರ ವ್ಯತ್ಯಾಸ ಇದೆ ಎಂಬುದು ನನಗೆ ಬಂದ ಮಾಹಿತಿ. ಆ ಸಂಖ್ಯೆ ಹೊರ ಬಂದರೆ ನಾನೇ ವಿನ್ನರ್ ಎಂದು ಅಶ್ವಿನಿ ಹೇಳಿದ್ದಾರೆ.
Advertisement