Chakravarthy chandrachud-Kichcha Sudeep
ಚಕ್ರವರ್ತಿ ಚಂದ್ರಚೂಡ್-ಕಿಚ್ಚ ಸುದೀಪ್

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು

ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
Published on

ಬೆಂಗಳೂರು: ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

'ವಾರಸ್ದಾರ' ಎಂಬ ಧಾರಾವಾಹಿಗಾಗಿ ನಮ್ಮ ಮನೆ ಹಾಗೂ ಕಾಫಿತೋಟದಲ್ಲಿ ಚಿತ್ರೀಕರಣ ಮಾಡಲು 2 ವರ್ಷಗಳ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಚಿತ್ರೀಕರಣ ಶುರುಮಾಡಿದ ಕೆಲವೇ ದಿನಗಳಲ್ಲಿ ಚಿತ್ರೀಕರಣ ಸ್ಥಗಿತಗೊಂಡಿತ್ತು. ಅಲ್ಲದೇ ಚಿತ್ರೀಕರಣಕ್ಕಾಗಿ ಕಾಫಿ ತೋಟ, ಮರಗಳನ್ನು ನಾಶ ಮಾಡಿದ್ದಾರೆ ಎಂದು ಕಾಫಿ ತೋಟದ ಮಾಲೀಕ ದೀಪಕ್ ಆರೋಪಿಸಿದ್ದಾರೆ.

ಅಗ್ರಿಮೆಂಟ್ ಪ್ರಕಾರ, 95 ಲಕ್ಷ ಪರಿಹಾರ ನೀಡುವಂತೆ ಕಿಚ್ಚ ಸುದೀಪ್ ಹಾಗೂ ಚಂದ್ರಚೂಡ್ ವಿರುದ್ಧ ಈ ಹಿಂದೆಯೇ ದೂರು ದಾಖಲಿಸಿದ್ದೆ. ಅಂದು 60 ಲಕ್ಷ ಹಣ ನೀಡುವುದಾಗಿ ಸುದೀಪ್ ಅವರು ಭರವಸೆ ನೀಡಿದ್ದರಿಂದ ದೂರು ಹಿಂಪಡೆದಿದ್ದೆ. 10 ಲಕ್ಷ ರೂಪಾಯಿ ಚೆಕ್ ನೀಡಿದ್ದು ಇನ್ನುಳಿದ ಹಣ ನೀಡದೇ ವಂಚಿಸಿದ್ದಾರೆ ಎಂದು ದೀಪಕ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ದೂರು ನೀಡಿದ್ದಾರೆ.

Chakravarthy chandrachud-Kichcha Sudeep
BBK12 ವೋಟ್​​​ ನಂಬರ್ ಆಚೆ ಬಂದರೆ ನಾನೇ ವಿನ್ನರ್: ಅಶ್ವಿನಿ ಗೌಡ ಸವಾಲು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com