

ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಉಗ್ರಂ ಮಂಜು ಎಂದೇ ಖ್ಯಾತಿ ಪಡೆದಿರುವ ಮಂಜುನಾಥ್ ಗೌಡ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೋಲಾರದ ಉಗ್ರಂ ಮಂಜು ಅವರು ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡಿದ ಉಗ್ರಂ ಮೂವಿಯಲ್ಲಿ ಖಳ ನಟನಾಗಿ ಅಮೋಘವಾಗಿ ಅಭಿನಯ ಮಾಡಿದ್ದರು.
ಈ ಸಿನಿಮಾದಿಂದಲೇ ಇವರಿಗೆ ಉಗ್ರಂ ಎನ್ನುವುದು ಹೆಸರಿನೊಂದಿಗೆ ತಳುಕು ಹಾಕಿಕೊಂಡಿದೆ. ಬಿಗ್‌ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು (ಜ.23) ಕುಟುಂಬಸ್ಥರ ಸಮ್ಮುಖದಲ್ಲಿ ಉಗ್ರಂ ಮಂಜು ಹಾಗೂ ಸಂಧ್ಯಾ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಸಂಧ್ಯಾ ಅವರು ಸ್ಪರ್ಶ್ ಆಸ್ಪತ್ರೆಯಲ್ಲಿ ಅಡ್ಮಿನ್ ಡಿಪಾರ್ಟ್ಮೆಂಟ್‌ನಲ್ಲಿದ್ದಾರೆ. ಇನ್ಸ್ಟಾದಲ್ಲಿ Transplant Coordinator ಎಂದು ಬರೆದುಕೊಂಡಿದ್ದಾರೆ.
Advertisement