

ಕನ್ನಡ ಚಿತ್ರರಂಗದ ಜನಪ್ರಿಯ ನಟಡಾಲಿ ಧನಂಜಯ್ ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ವೈದ್ಯೆ ಧನ್ಯತಾ ಅವರೊಟ್ಟಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಪೋಷಕರಾಗುತ್ತಿದ್ದು, ಖುಷಿಯ ವಿಷಯವನ್ನು ಡಾಲಿ ಧನಂಜಯ್ ಹಂಚಿಕೊಂಡಿದ್ದಾರೆ. ಮಾಧ್ಯಮವೊಂದರ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಧನಂಜಯ್ ಅವರು, ತಮ್ಮ ಕುಟುಂಬಕ್ಕೆ ಇನ್ನೊಂದು ಜೀವ ಸೇರ್ಪಡೆ ಆಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಆ ಮೂಲಕ ತಾವು ತಂದೆ ಆಗುತ್ತಿರುವುದಾಗಿ ಡಾಲಿ ಧನಂಜಯ್ ಹೇಳಿದ್ದಾರೆ.
Advertisement