'Toxic' ಚಿತ್ರದ 'Tabaahi' Video ಸಾಂಗ್ ರಿಲೀಸ್: ಬೋಲ್ಡ್ ಅವತಾರದಲ್ಲಿ ಯಶ್-ಕಿಯಾರಾ; Romantic ಕೆಮಿಸ್ಟ್ರಿ ವೈರಲ್..!

ಚಿತ್ರದಲ್ಲಿ ಯಶ್ 'ರಾಯ್' ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಿಯಾರಾ ಅಡ್ವಾಣಿ 'ರುಮಿ' ಪಾತ್ರಕ್ಕೆ ಜೀವ ತುಂಬಿದ್ದಾರೆ. ಹಾಡಿನ ಕೆಲವು ದೃಶ್ಯಗಳಲ್ಲಿ ನಟಿ ನಯನತಾರಾ ಕೂಡ ಕಾಣಿಸಿಕೊಂಡಿದ್ದಾರೆ.
Toxic movie still
ಟಾಕ್ಸಿಕ್ ಸಿನಿಮಾ ಸ್ಟಿಲ್
Updated on

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಮೊದಲ ವಿಡಿಯೊ ಸಾಂಗ್ 'ತಬಾಹಿ' ಬುಧವಾರ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬೆಳಿಗ್ಗೆ 11.33ಕ್ಕೆ ಬಿಡುಗಡೆಯಾದ ಈ ಹಾಡಿನಲ್ಲಿ ಯಶ್ ಹಾಗೂ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರ ಬೋಲ್ಡ್ ಮತ್ತು ಗ್ಲಾಮರಸ್ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ.

ಈ ಹಿಂದೆ ಬಿಡುಗಡೆಯಾಗಿದ್ದ ಲಿರಿಕಲ್ ಸಾಂಗ್ ಉತ್ತಮ ಪ್ರತಿಕ್ರಿಯೆ ಪಡೆದಿದ್ದರೆ, ಇದೀಗ ಬಿಡುಗಡೆಯಾಗಿರುವ ವಿಡಿಯೊ ಸಾಂಗ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಹಾಡಿನುದ್ದಕ್ಕೂ ಯಶ್ ಮತ್ತು ಕಿಯಾರಾ ನಡುವಿನ ರೊಮ್ಯಾಂಟಿಕ್ ದೃಶ್ಯಗಳು, ಅದ್ದೂರಿ ಸೆಟ್‌ಗಳು ಹಾಗೂ ಭವ್ಯ ದೃಶ್ಯ ವಿನ್ಯಾಸ ಗಮನ ಸೆಳೆಯುತ್ತಿವೆ.

ಚಿತ್ರದಲ್ಲಿ ಯಶ್ 'ರಾಯ್' ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಿಯಾರಾ ಅಡ್ವಾಣಿ 'ರುಮಿ' ಪಾತ್ರಕ್ಕೆ ಜೀವ ತುಂಬಿದ್ದಾರೆ. ಹಾಡಿನ ಕೆಲವು ದೃಶ್ಯಗಳಲ್ಲಿ ನಟಿ ನಯನತಾರಾ ಕೂಡ ಕಾಣಿಸಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಯಶ್ ಇಂತಹ ಬೋಲ್ಡ್ ಆಗಿ ತೆರೆ ಮೇಲೆ ಕಾಣಿಸಿಕೊಂಡಿದ್ದು, ಇದು ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.

'ತಬಾಹಿ' ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಹಾಡಿನ ದೃಶ್ಯ ವೈಭವ, ನೃತ್ಯ ಸಂಯೋಜನೆ ಮತ್ತು ಛಾಯಾಗ್ರಹಣ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುತ್ತಿದೆ.

ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿವೆ.

ಚಿತ್ರದಲ್ಲಿ ಯಶ್ ಮತ್ತು ಕಿಯಾರಾ ಅಡ್ವಾಣಿ ಜೊತೆಗೆ ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಹಾಗೂ ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ರಾಜೀವ್ ರವಿ ಛಾಯಾಗ್ರಹಣ ಮಾಡಿದ್ದು, ರವಿ ಬಸ್ರೂರು ಸಂಗೀತ ನೀಡಿದ್ದಾರೆ.

ಮೊದಲಿಗೆ ಮಾರ್ಚ್ 19ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಇದೀಗ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾದ ಈ ಚಿತ್ರವನ್ನು ತೆಲುಗು, ತಮಿಳು ಹಾಗೂ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ. ಈಗ ಬಿಡುಗಡೆಯಾಗಿರುವ 'ತಬಾಹಿ' ವಿಡಿಯೊ ಸಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

Toxic movie still
ಯಶ್ ನಟನೆಯ ಟಾಕ್ಸಿಕ್ ಬಿಡುಗಡೆ ಹಿನ್ನೆಲೆಯಲ್ಲಿ 'ಅಯೋಗ್ಯ 2' ರಿಲೀಸ್ ಡೇಟ್ ಬದಲು; ಆಗಸ್ಟ್ 7ರಂದು ತೆರೆಗೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com