'ಆ ಪಾತ್ರ ನಿರ್ವಹಿಸಿದ ರೀತಿ...': ನಟಿ ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ರಾಕಿಂಗ್‌ ಸ್ಟಾರ್‌ ಯಶ್ ಫಿದಾ!

ದೆಹಲಿಯಲ್ಲಿ ನಡೆದ ‘ರಾಮಾಯಣ: ಪ್ರಥಮ್ ಸಂಕಲ್ಪ’, ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಪಾತ್ರದ ಬಗ್ಗೆ ಶ್ಲಾಘಿಸಿದ ಯಶ್.
Rocking star Yash praises Rakul Preet Singh's Surpanakha in Ramayana
ಯಶ್ - ರಕುಲ್ ಪ್ರೀತ್ ಸಿಂಗ್
Updated on

ನವದೆಹಲಿ: ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ 'ರಾಮಾಯಣ'ದಲ್ಲಿ ಶೂರ್ಪನಖಿ ಪಾತ್ರದಲ್ಲಿ ಅಭಿನಯಿಸಿರುವ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಬಗ್ಗೆ ರಾಕಿಂಗ್‌ ಸ್ಟಾರ್‌ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ನಡೆದ ‘ರಾಮಾಯಣ: ಪ್ರಥಮ್ ಸಂಕಲ್ಪ’, ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಶೂರ್ಪನಖಿ ಪಾತ್ರದ ಬಗ್ಗೆ ಶ್ಲಾಘಿಸಿದ ಯಶ್, ಅವರು ಆ ಐಕಾನಿಕ್ ಪಾತ್ರವನ್ನು ನಿರ್ವಹಿಸಿದ ರೀತಿ ನಿಜಕ್ಕೂ ಗಮನಾರ್ಹವಾಗಿದೆ ಎಂದಿದ್ದಾರೆ.

ರಾಮಾಯಣದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಅಭಿನಯವು ಚಿತ್ರ ಬಿಡುಗಡೆಯಾಗುವ ಮೊದಲೇ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಇದೀಗ ಈಗ ರಾವಣನ ಪಾತ್ರದಲ್ಲಿ ನಟಿಸಿರುವ ಕನ್ನಡದ ನಟ ಯಶ್ ಕೂಡ ರಕುಲ್ ಅಭಿನಯವನ್ನು ಬಹಿರಂಗವಾಗಿ ಹೊಗಳಿದ್ದಾರೆ.

Rocking star Yash praises Rakul Preet Singh's Surpanakha in Ramayana
'ಸೀತೆ ಪಾತ್ರಕ್ಕಾಗಿ ನನ್ನ ಆಲೋಚನೆಗಳನ್ನು ಶುದ್ಧವಾಗಿಟ್ಟಿದ್ದೆ': ರಾಮಾಯಣ ಚಿತ್ರದ ಶೂಟಿಂಗ್ ಅನುಭವ ಬಿಚ್ಚಿಟ್ಟ ಸಾಯಿ ಪಲ್ಲವಿ

ಸಾಮಾನ್ಯವಾಗಿ ಶೂರ್ಪನಖಿ ಪಾತ್ರವನ್ನು ಒಂದೇ ದೃಷ್ಟಿಕೋನದಲ್ಲಿ ತೋರಿಸಲಾಗುತ್ತದೆ. ಆದರೆ, ಈ ಸಿನಿಮಾದಲ್ಲಿ ಆ ಪಾತ್ರವನ್ನು ಹೆಚ್ಚು ಭಾವನಾತ್ಮಕವಾಗಿ ಮತ್ತು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ರಕುಲ್ ಪ್ರೀತ್ ಸಿಂಗ್ ತಮ್ಮ ಅಭಿನಯದ ಮೂಲಕ ಪಾತ್ರಕ್ಕೆ ಹೊಸ ಅರ್ಥ ಕೊಟ್ಟಿದ್ದಾರೆ.

ರಾಮಾಯಣ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಕನ್ನಡ ನಟ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಈಗಾಗಲೇ ಭಾರೀ ಹೈಪ್ ಸೃಷ್ಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com