

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಗೀತು ಮೋಹನ್ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಎರಡನೇ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇಂದು ಬೆಳಗ್ಗೆ 11.33ಕ್ಕೆ ‘ಮನಮೋಹಕ..’ ಹಾಡು ಬಿಡುಗಡೆಯಾಗಿದ್ದು ತಬಾಹಿಯಂತೆ ಸೋಷಿಯಲ್ ಮೀಡಿಯಾದಲ್ಲಿ, ಇಂಟರ್ನೆಟ್ ನಲ್ಲಿ ಸದ್ದು ಮಾಡುತ್ತಿದೆ.
ಪ್ರಣಯಿಗಳ ಮನಗೆದ್ದ ‘ಮನಮೋಹಕ’
ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡು ಬೋಲ್ಡ್ ನೆಸ್ ಮೂಲಕ ಗಮನ ಸೆಳೆದಿದ್ದರು.
ಇಂದು ಬಿಡುಗಡೆಯಾಗಿರುವ ‘ಮನಮೋಹಕ’ ಹಾಡು ಪ್ರಣಯಗೀತೆಯಾಗಿದ್ದು, ಹಾಡಿನಲ್ಲಿ ಯಶ್ ಹಾಗೂ ತಾರಾ ಸುತಾರಿಯಾ ಜೋಡಿಯಾಗಿ ಕಾಣಿಸಿಕೊಂಡಿದ್ದು, ಇಬ್ಬರ ನಡುವಿನ ಸ್ಕ್ರೀನ್ ಕೆಮಿಸ್ಟ್ರಿ ಗಮನ ಸೆಳೆಯುತ್ತಿದೆ. ಹಾಡಿನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಕೂಡ ಕಾಣಿಸಿಕೊಳ್ಳುತ್ತಾರೆ.
‘ಟಾಕ್ಸಿಕ್’ ಚಿತ್ರದ ಮೊದಲ ಹಾಡು ‘ತಬಾಹಿ’ಗೆ ನಿರ್ದೇಶಕ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದರೆ, ಮನಮೋಹಕ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸಿದ್ದಾರ್ಥ್ ಬಸ್ರೂರ್ ಹಾಡಿದ್ದಾರೆ.