ರಾಜಕೀಯಕ್ಕಿಂತ ಮಾನವೀಯತೆ ದೊಡ್ಡದು: ಅನ್ಯಾಯದ ವಿರುದ್ಧ ಮೌನ ವಹಿಸುವುದೇ ದೇಶಕ್ಕೆ ದೊಡ್ಡ ಬೆದರಿಕೆ; ದೆಹಲಿ ಪ್ರತಿಭಟನೆಗೆ 'ಯುವ' ಪ್ರತಿಕ್ರಿಯೆ

ಈ ಪೋಸ್ಟ್ ಯಾವುದೇ ರಾಜಕೀಯ ಪಕ್ಷದ ಪರವೂ ಅಲ್ಲ, ವಿರೋಧವೂ ಅಲ್ಲ. ಇದು ಮಾನವೀಯತೆಯ ಬಗ್ಗೆ. ದೆಹಲಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸುಮ್ಮನೆ ನೋಡುತ್ತಾ ಹೋಗಬಾರದು.
Yuvaraj kumar
ಯುವರಾಜ್ ಕುಮಾರ್
Updated on

ಬೆಂಗಳೂರು: ವಿದ್ಯಾರ್ಥಿಗಳ ಮೇಲಿನ ಘಟನೆಯನ್ನು ರಾಜಕೀಯದ ದೃಷ್ಟಿಯಿಂದ ನೋಡುವ ಬದಲು ಮಾನವೀಯತೆಯ ನೆಲೆಯಲ್ಲಿ ಚರ್ಚಿಸಬೇಕು ಎಂದು ನಟ ಯುವರಾಜ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲ್ಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ಕುರಿತು ಕನ್ನಡದ ನಟ ಯುವರಾಜ್ ಕುಮಾರ್ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಒಂದು ರಾಷ್ಟ್ರಕ್ಕೆ ಅತಿದೊಡ್ಡ ಅಪಾಯ ಭಿನ್ನಾಭಿಪ್ರಾಯದಿಂದ ಬರುವುದಿಲ್ಲ. ಸಂಕಷ್ಟ ಅನುಭವಿಸುತ್ತಿರುವವರ ಎದುರು ಮೌನವಾಗಿರುವುದರಿಂದ ಬರುತ್ತದೆ. ರಾಜಕೀಯಕ್ಕಿಂತ ಮಾನವೀಯತೆ ದೊಡ್ಡದು. ಪ್ರಚಾರಕ್ಕಿಂತ ಸತ್ಯ ದೊಡ್ಡದು. ಭಯಕ್ಕಿಂತ ಧ್ವನಿ ದೊಡ್ಡದು ಎಂದು ಪೋಸ್ಟ್ ಮಾಡಿದ್ದಾರೆ.

'ಈ ಪೋಸ್ಟ್ ಯಾವುದೇ ರಾಜಕೀಯ ಪಕ್ಷದ ಪರವೂ ಅಲ್ಲ, ವಿರೋಧವೂ ಅಲ್ಲ. ಇದು ಮಾನವೀಯತೆಯ ಬಗ್ಗೆ. ದೆಹಲಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸುಮ್ಮನೆ ನೋಡುತ್ತಾ ಹೋಗಬಾರದು. ದೇಶದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಒಂದೇ ವಿಚಾರಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಧ್ವನಿಯನ್ನು ಕೇಳುವುದು, ಏನಾಗುತ್ತಿದೆ ಎಂದು ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ. ಯಾರು ಹೊಣೆ? ಈ ಪರಿಸ್ಥಿತಿ ತಪ್ಪಿಸಬಹುದಿತ್ತೆ? ವಿದ್ಯಾರ್ಥಿಗಳಿಗೆ ಗಾಯಗಳಾಗಲು ಕಾರಣವೇನು? ಇಂತಹ ಘಟನೆಗಳು ಮತ್ತೆ ನಡೆಯದಂತೆ ನಾವು ಏನು ಮಾಡಬೇಕು?'' ಎಂದು ತಮ್ಮ ಪೋಸ್ಟ್‌ನಲ್ಲಿ ಯುವ ರಾಜ್‌ಕುಮಾರ್ ಪ್ರಶ್ನಿಸಿದ್ದಾರೆ.

Yuvaraj kumar
ಸಂಸತ್ತಿನಲ್ಲೂ ಮಾರ್ಧನಿಸಿದ CJP ಪ್ರತಿಭಟನೆ; ಉಭಯ ಸದನಗಳ ಕಲಾಪ ಮುಂದೂಡಿಕೆ: Abhijeet Dipke ಬಂಧಿಸಿಲ್ಲ ಎಂದ ದೆಹಲಿ ಪೊಲೀಸ್

ದೆಹಲಿಯಲ್ಲಿನ ವಿದ್ಯಾರ್ಥಿಗಳ ಪ್ರತಿಭಟನೆ ದೇಶದ ಗಮನ ಸೆಳೆದಿರುವ ಬೆಳವಣಿಗೆಯಾಗಿದೆ. ಈ ಕುರಿತು ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ನಿರ್ಲಕ್ಷಿಸಬಾರದು ಎಂದು ಅವರು ಹೇಳಿದ್ದಾರೆ. ಈ ಘಟನೆಯ ಹೊಣೆ ಯಾರದ್ದು, ಇದನ್ನು ತಡೆಯಲು ಸಾಧ್ಯವಿತ್ತೇ, ವಿದ್ಯಾರ್ಥಿಗಳು ಏಕೆ ಗಾಯಗೊಂಡರು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಯಾವ ಪಾಠಗಳನ್ನು ಕಲಿಯಬೇಕು ಎಂಬ ಪ್ರಶ್ನೆಗಳನ್ನು ಯುವರಾಜ್ ಕುಮಾರ್ ಮುಂದಿಟ್ಟಿದ್ದಾರೆ.

ಪ್ರತಿಯೊಬ್ಬ ನಾಗರಿಕನಿಗೂ ಮಾಹಿತಿ ತಿಳಿದುಕೊಳ್ಳುವ ಜವಾಬ್ದಾರಿ ಇದೆ. ನೆಲಮಟ್ಟದಲ್ಲಿರುವವರ ಧ್ವನಿಯನ್ನು ಆಲಿಸಿ. ಸತ್ಯಾಂಶಗಳನ್ನು ತಿಳಿದುಕೊಳ್ಳಿ. ಕಷ್ಟದ ಪ್ರಶ್ನೆಗಳನ್ನೂ ಕೇಳಿ. ನಿಮ್ಮದೇ ಆದ ಅಭಿಪ್ರಾಯ ರೂಪಿಸಿಕೊಳ್ಳಿ. ಒಂದು ರಾಷ್ಟ್ರ ತನ್ನ ಜನರು ಕಣ್ಮುಚ್ಚಿ ನೋಡುವುದನ್ನು ಬಿಟ್ಟು, ಮಾನವೀಯತೆಯ ಪರ ನಿಂತು, ಹೊಣೆಗಾರಿಕೆಯನ್ನು ಕೇಳಿದಾಗ ಇನ್ನಷ್ಟು ಬಲವಾಗುತ್ತದೆ.

ಇದು ನಮ್ಮೆಲ್ಲರ ಸಮಸ್ಯೆ. ಏಕೆಂದರೆ ಒಂದು ರಾಷ್ಟ್ರದ ಭವಿಷ್ಯವನ್ನು ಅದರ ಜನರ ಜಾಗೃತಿ, ಮಾನವೀಯತೆ ಮತ್ತು ಹೊಣೆಗಾರಿಕೆ ರೂಪಿಸುತ್ತವೆ' ಇಂತಹ ಘಟನೆಗಳು ಮತ್ತೆ ನಡೆಯದಂತೆ ನಾವು ಯಾವ ಪಾಠಗಳನ್ನು ಕಲಿಯಬೇಕು ಎಂದು ಪ್ರಶ್ನಿಸಿದ್ದಾರೆ.

ರಾಜಕೀಯಕ್ಕಿಂತ ಮೊದಲು ಸಹಾನುಭೂತಿ, ಪ್ರಚಾರಕ್ಕಿಂತ ಮೊದಲು ಸತ್ಯ ಹಾಗೂ ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆ ಇರಬೇಕು ಎಂದು ಹೇಳಿರುವ ಅವರು, ರಾಜಕೀಯಕ್ಕಿಂತ ಮಾನವೀಯತೆ, ಪ್ರಚಾರಕ್ಕಿಂತ ಸತ್ಯ ಮತ್ತು ಭಯಕ್ಕಿಂತ ಧ್ವನಿ ದೊಡ್ಡದು ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com