

ಮುಂಬಯಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಆಗ್ರಹಿಸಿದ್ದಾರೆ.
ಈ ಸಂಬಂಧ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ತಮ್ಮ ಪೋಸ್ಟ್‌ನಲ್ಲಿ ಜ್ಯೋತಿಕಾ, ʻಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ರಾಜೀನಾಮೆ ನೀಡಿʼ ಎಂದು ನೇರವಾಗಿ ಒತ್ತಾಯಿಸಿದ್ದಾರೆ.
ಅಲ್ಲದೇ, ನಾನು ವಿದ್ಯಾರ್ಥಿಗಳು ಮತ್ತು ನಮ್ಮ ದೇಶದ ಭವಿಷ್ಯದ ಪರವಾಗಿದ್ದೇನೆ. ನಾನು ಹೊಣೆಗಾರಿಕೆಯ ಪರವಾಗಿದ್ದೇನೆ. ನಾನು ಪ್ರಜಾಪ್ರಭುತ್ವ ಭಾರತದ ಪರವಾಗಿದ್ದೇನೆ. ನಾನು ಸುಧಾರಿತ ಶಿಕ್ಷಣ ವ್ಯವಸ್ಥೆಯ ಪರವಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.