

ಕನ್ನಡದ ನಟಿ ಶುಭಾ ಪೂಂಜಾ ಡಿವೋರ್ಸ್ ಕೇಸು ಮಾಧ್ಯಮಗಳಲ್ಲಿ ಇತ್ತೀಚೆಗೆ ಭಾರೀ ಸುದ್ದಿಯಾಗಿತ್ತು. ಈ ಎಲ್ಲಾ ಚರ್ಚೆಗಳ ನಡುವೆ ನಟಿ ಶುಭಾ ಪೂಂಜಾ ಇಂದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಮಾಧ್ಯಮ ಮಿತ್ರರಲ್ಲಿ ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಶುಭಾ ಪೂಂಜಾ ಅವರು 2022ರಲ್ಲಿ ಉಡುಪಿ ಮೂಲದ ಸುಮಂತ್ ಬಿಲ್ಲವ್ ಅವರನ್ನು ಮದುವೆಯಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ದಂಪತಿಗಳು ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡಿದ್ದವು.
ಇದೇ ಸಮಯದಲ್ಲಿ ಅವರು ಪತಿ ಜೊತೆಗಿನ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ವಿಚ್ಛೇದನ ಸುದ್ದಿಯನ್ನು ಅಲ್ಲಗಳೆಯಲೂ ಇಲ್ಲ, ಒಪ್ಪಿಕೊಂಡಿಯೂ ಇಲ್ಲ. ಇದೀಗ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಮನವಿ ಮಾಡಿಕೊಂಡಿದ್ದಾರೆ,
ಸೂಕ್ತ ಸಮಯ ಸಂದರ್ಭ ಬಂದಾಗ, ತಾವೇ ವೈಯಕ್ತಿಕವಾಗಿ ನಿಮ್ಮೆಲ್ಲರೊಂದಿಗೆ ಯಾವುದೇ ಅಪ್‌ಡೇಟ್ ಇದ್ದರೂ ಹಂಚಿಕೊಳ್ಳುತ್ತೇನೆ. ಅಲ್ಲಿಯವರೆಗೆ ಊಹಾಪೋಹಗಳನ್ನು ಹಬ್ಬಿಸಬೇಡಿ, ನಿಮ್ಮ ನಿರಂತರ ಪ್ರೀತಿ, ಬೆಂಬಲ ಮತ್ತು ದಯೆಗೆ ಮತ್ತೊಮ್ಮೆ ಧನ್ಯವಾದಗಳು ಎಂದು ಮನವಿ ಮಾಡಿಕೊಂಡಿದ್ದಾರೆ ಶುಭಾ ಪೂಂಜಾ.
Advertisement