ರಕ್ತದೊತ್ತಡ: ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!

ಮನೆಯಲ್ಲಿ ಇದ್ದ ವೇಳೆ ವಿನೋದ್ ಪ್ರಭಾಕರ್ ಅವರಿಗೆ ರಕ್ತದೊತ್ತಡ (ಬಿಪಿ) ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರ ಕುಟುಂಬದವರು ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದಾರೆ.
Vinod Prabhakar
ವಿನೋದ್ ಪ್ರಭಾಕರ್
Updated on

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆಯಲ್ಲಿ ಇದ್ದ ವೇಳೆ ವಿನೋದ್ ಪ್ರಭಾಕರ್ ಅವರಿಗೆ ರಕ್ತದೊತ್ತಡ (ಬಿಪಿ) ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರ ಕುಟುಂಬದವರು ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದಾರೆ.

ಕಾರ್ಡಿಯಾ ಕೇರ್ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಬೆಳಗ್ಗೆಯಿಂದಲೇ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಪರೀಕ್ಷೆ ಹಾಗೂ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

Vinod Prabhakar
175ನೇ ಚಿತ್ರ 'ಮದರ್'ನಲ್ಲಿ ವಿಭಿನ್ನ ಪಾತ್ರದಲ್ಲಿ ನಟಿ ಶ್ರುತಿ; ಅವರನ್ನು ಮೀರಿಸುವವರೇ ಇಲ್ಲ ಎಂದ ವಿನೋದ್ ಪ್ರಭಾಕರ್

ಇತ್ತೀಚೆಗೆ ತಮ್ಮ ಬಹುನಿರೀಕ್ಷಿತ ‘ಬಲರಾಮ’ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ವಿನೋದ್ ಪ್ರಭಾಕರ್ ತೊಡಗಿಸಿಕೊಂಡಿದ್ದರು. ಈ ನಡುವೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಆಸ್ಪತ್ರೆಯಲ್ಲಿ ಅವರಿಗೆ ಅಗತ್ಯ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com