Toxic movie- ಯಶ್ ಅಭಿಮಾನಿಗಳಿಗೆ ಯುಗಾದಿಗೆ ನಿರಾಸೆ: 'ಟಾಕ್ಸಿಕ್' ಬಿಡುಗಡೆ ದಿನಾಂಕ ಮುಂದೂಡಿಕೆ

ಆದರೆ ಯಶ್ ಅವರ ಅಭಿನಯದ ಬಹು ನಿರೀಕ್ಷಿತ ಚಿತ್ರ Toxic: A Fairytale for Grown Ups ಮಾರ್ಚ್ 19ರಂದು ಬಿಡುಗಡೆಯಾಗಬೇಕಿದ್ದು ಮಧ್ಯಪ್ರಾಚ್ಯ ದೇಶಗಳಲ್ಲಿ ಇರಾನ್-ಇಸ್ರೇಲ್ ಅಮೆರಿಕದ ದಾಳಿಯ ಹಿನ್ನೆಲೆಯಲ್ಲಿ ಉಂಟಾಗಿರುವ ಉದ್ವಿಗ್ನತೆ ನಡುವೆ ಮುಂದೂಡಲಾಗಿದೆ.
Yash in Toxic
ಟಾಕ್ಸಿಕ್ ಚಿತ್ರದಲ್ಲಿ ಯಶ್
Updated on

ರಾಕಿಂಗ್ ಸ್ಟಾರ್ ಯಶ್ ಅವರ ಅಭಿಮಾನಿಗಳಿಗೆ ನಿರಾಶೆಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳು ಯುಗಾದಿಗೆ ಅವರ ಟಾಕ್ಸಿಕ್ ಚಿತ್ರ ಬಿಡುಗಡೆಯ ಖುಷಿಯಲ್ಲಿದ್ದರು.

ಆದರೆ ಯಶ್ ಅವರ ಅಭಿನಯದ ಬಹು ನಿರೀಕ್ಷಿತ ಚಿತ್ರ Toxic: A Fairytale for Grown Ups ಮಾರ್ಚ್ 19ರಂದು ಬಿಡುಗಡೆಯಾಗಬೇಕಿದ್ದು ಮುಂದೂಡಲಾಗಿದೆ. ಗೀತು ಮೋಹನ್ ದಾಸ್ ನಿರ್ದೇಶಿಸಿರುವ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಭಿನಯದ Dhurandhar: The Revenge ಚಿತ್ರದೊಂದಿಗೆ ಮುಖಾಮುಖಿಯಾಗಬೇಕಿತ್ತು.

ಮಧ್ಯಪ್ರಾಚ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ. ಧುರಂಧರ್ ಚಿತ್ರ ನಿಗದಿಯಂತೆ ಮಾರ್ಚ್ 19ರಂದೇ ಬಿಡುಗಡೆಯಾಗಲಿದೆ.

Yash in Toxic
ಬಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಅವಧಿ 3 ಗಂಟೆ 20 ನಿಮಿಷ?

ಮಾರ್ಚ್ 4ರಂದು ಯಶ್ ತಮ್ಮ ನಿರ್ಮಾಣ ಸಂಸ್ಥೆ ಹಾಗೂ KVN Productions ಪರವಾಗಿ ಪ್ರಕಟಣೆ ಹಂಚಿಕೊಂಡು ಮುಂದೂಡಿಕೆಯ ಕಾರಣವನ್ನು ವಿವರಿಸಿದರು. “ಪ್ರಸ್ತುತ ವಿಶ್ವದಲ್ಲಿನ ಅನಿಶ್ಚಿತ ಪರಿಸ್ಥಿತಿ, ವಿಶೇಷವಾಗಿ ಮಧ್ಯಪ್ರಾಚ್ಯಾದಲ್ಲಿ ನಡೆಯುತ್ತಿರುವ ಘಟನೆಗಳು, ವಿಶ್ವದಾದ್ಯಂತ ಹೆಚ್ಚು ಪ್ರೇಕ್ಷಕರನ್ನು ತಲುಪುವ ನಮ್ಮ ಗುರಿಗೆ ಅಡ್ಡಿಯಾಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಮೆರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದರೆ, ಇರಾನ್ ಪ್ರತಿಯಾಗಿ ಕ್ಷಿಪಣಿ ದಾಳಿ ನಡೆಸಿದೆ. ಟಾಕ್ಸಿಕ್ ಚಿತ್ರದ ವಿದೇಶಿ ವಿತರಣಾ ಸಹಭಾಗಿಯಾದ Phars Films ಚಿತ್ರದ ಬಿಡುಗಡೆಯನ್ನು ಮರುನಿಗದಿ ಮಾಡಲು ಸಲಹೆ ನೀಡಿದರೆಂದು ನಿರ್ಮಾಪಕರು ತಿಳಿಸಿದ್ದಾರೆ.

ಮಾರ್ಚ್ 2ರಂದು ಚಿತ್ರದ ಮೊದಲ ಹಾಡು “ತಬಾಹಿ” ಬಿಡುಗಡೆಗೊಂಡಿತ್ತು. ಹಾಡಿಗೆ ಮೆಚ್ಚುಗೆ ವ್ಯಕ್ತವಾದರೂ, ವೀಡಿಯೊ ಬಿಡುಗಡೆ ಮಾಡದಿದ್ದಕ್ಕೆ ಕೆಲ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಮಾರ್ಚ್ 8ರಂದು ಬೆಂಗಳೂರಿನಲ್ಲಿ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದ್ದ ಸಮಯದಲ್ಲೇ ಮುಂದೂಡಿಕೆಯ ಸುದ್ದಿ ಬಂದಿದೆ.

ಇಂಗ್ಲಿಷ್ ಮತ್ತು ಕನ್ನಡದಲ್ಲಿ ಚಿತ್ರೀಕರಿಸಲಾದ ಈ ಚಿತ್ರವನ್ನು ಗೀತು ಮೋಹನದಾಸ್ ನಿರ್ದೇಶಿಸಿದ್ದು, ಕಥೆ ಬರವಣಿಗೆಯಲ್ಲಿ ಯಶ್ ಸಹ ತೊಡಗಿಸಿಕೊಂಡಿದ್ದರು. ಚಿತ್ರದಲ್ಲಿ ಯಶ್ ಜೊತೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. Monster Mind Creations ಜೊತೆಗೆ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ Toxic: A Fairytale for Grown Ups ಜೂನ್ 4ರಂದು ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com