

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ (Daali Dhananjaya) ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಹುಟ್ಟಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್ ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕೃತಿ ಮಡಿಲಲ್ಲಿ ಮಾಡಿಕೊಂಡಿದ್ದ ಬೇಬಿಬಂಪ್ ಫೋಟೋಶೂಟ್ ನ್ನು ಹಂಚಿಕೊಂಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಮಗು ಜನನವಾಗಿದೆ.
2025ರ ಫೆ.16ರಂದು ಡಾಲಿ ಧನಂಜಯ್ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.
Advertisement