

ಕನ್ನಡ ಚಿತ್ರರಂಗಕ್ಕೆ ಇಂದು ಬೆಳಗ್ಗೆಯೇ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ದಿಲೀಪ್ ರಾಜ್ ಅವರಿಗೆ ತೀವ್ರ ಹಾರ್ಟ್ ಅಟ್ಯಾಕ್ (Heart Attack) ಆಗಿತ್ತು.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟು ಹೊತ್ತಿಗೆ ಪ್ರಾಣಪಕ್ಷಿ ಹಾರಿಹೋಗಿತ್ತು. ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.
ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಇತ್ತೀಚೆಗೆ ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.
Advertisement