

ಟೈಟಲ್ ಹಾಗೂ ಪೋಸ್ಟರ್ ನಿಂದ ಸಿನಿ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ದೇವಿ ಮಹಾತ್ಮೆ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಚಿತ್ರದ ಹಾಡುಗಳು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗೆ ಮಾರಾಟವಾಗಿರುವುದು ಇಡೀ ಚಿತ್ರತಂಡ ಸಂತಸಕ್ಕೆ ಕಾರಣವಾಗಿದೆ.
ಹೊಂಬಾಳೆ ಮ್ಯೂಸಿಕ್ ದೇವಿ ಮಹಾತ್ಮೆ ಸಿನಿಮಾದ ಆಡಿಯೋ ಹಕ್ಕನ್ನು ಖರೀದಿ ಮಾಡಿದೆ. ಅಂದಹಾಗೇ ಈ ಚಿತ್ರದ ಸೃಷ್ಟಿಕರ್ತರು ನಾಗರಾಜ ಸೋಮಯಾಜಿ. ಮರ್ಯಾದೆ ಪ್ರಶ್ನೆ ಸಿನಿಮಾ ಬಳಿಕ ಅವರ ಸಾರಥ್ಯದಲ್ಲಿ ಮೂಡಿಬರ್ತಿರುವ ಚಿತ್ರ ಇದಾಗಿದೆ.
ದೇವಿ ಮಹಾತ್ಮೆ ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ನಾಗರಾಜ ಸೋಮಯಾಜಿ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಬರವಣಿಗೆಯಲ್ಲಿ ಅರವಿಂದ್ ಕುಪ್ಳೀಕರ್, ಭಾಸ್ಕರ್ ಬಂಗೇರ ಹಾಗೂ ಗುರು ಆರ್ಯ ಹಾಗೂ ವಾದಿರಾಜ ಶೆಟ್ಟಿ ಜೊತೆಯಾಗಿದ್ದಾರೆ.
ಯುವಿಜಿ ಸ್ಟುಡಿಯೋ ಬ್ಯಾನರ್ ನಡಿ ವಿದ್ಯಾ ಗಾಂಧಿರಾಜನ್ ಸಿನಿಮಾಗೆ ಬಂಡವಾಳ ಹಾಡಿದ್ದಾರೆ. ಗಾಂಧಿರಾಜನ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಒಂದೊಳ್ಳೆ ತಾಂತ್ರಿಕ ವರ್ಗ ಚಿತ್ರದಲ್ಲಿ ಕೆಲಸ ಮಾಡ್ತಿದ್ದು, ಎಸ್ ಕೆ ರಾವ್ ಛಾಯಾಗ್ರಹಣ ಹಾಗೂ ಲಿಕಿತ್ ಪ್ರಸಾದ್ ಕೆ ಶೆಟ್ಟಿ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ದೇವಿ ಮಹಾತ್ಮೆಗೆ ಸಿನಿಮಾಗಿದೆ.
Advertisement