ತಾರಕಕ್ಕೇರಿದ ಧನ್ವೀರ್-ವಿಜಯಲಕ್ಷ್ಮಿ ಸಂಘರ್ಷ: ಮಾನನಷ್ಟ ದೂರು ದಾಖಲಿಸಿದ ನಟ ದರ್ಶನ್ ಪತ್ನಿ

ನಟ ಧನ್ವೀರ್ ಅವರು ತಮ್ಮ ವಿರುದ್ಧ ಮಾನನಷ್ಟ ಆಗುವಂತಹ ಹೇಳಿಕೆಗಳನ್ನು ನೀಡಿದ್ದು, ಆ ಹೇಳಿಕೆಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕವಾಗಿ ಪ್ರಕಟಿಸಿ ಪ್ರಸಾರ ಮಾಡಲಾಗಿದೆ ಎಂದು ವಿಜಯಲಕ್ಷ್ಮಿ ದೂರಿನಲ್ಲಿ ಆರೋಪಿಸಿದ್ದಾರೆ.
Actor Darshan Wife Vijayalakshmi Files Criminal Defamation Case Against Actor Dhanveerrah
ನಟ ದನ್ವೀರ್ ಮತ್ತು ವಿಜಯಲಕ್ಷ್ಮಿ
Updated on: 

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಧನ್ವೀರ್ ಹಾಗೂ ವಿಜಯಲಕ್ಷ್ಮಿ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದ್ದು, ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಅವರು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ವಾಹಿನಿಯೊಂದು ವರದಿ ಮಾಡಿದ್ದು, ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಈ ದೂರು ಸಲ್ಲಿಕೆಯಾಗಿದೆ ಎಂದು ಹೇಳಲಾಗಿದೆ.

ನಟ ಧನ್ವೀರ್ ಅವರು ತಮ್ಮ ವಿರುದ್ಧ ಮಾನನಷ್ಟ ಆಗುವಂತಹ ಹೇಳಿಕೆಗಳನ್ನು ನೀಡಿದ್ದು, ಆ ಹೇಳಿಕೆಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕವಾಗಿ ಪ್ರಕಟಿಸಿ ಪ್ರಸಾರ ಮಾಡಲಾಗಿದೆ ಎಂದು ವಿಜಯಲಕ್ಷ್ಮಿ ದೂರಿನಲ್ಲಿ ಆರೋಪಿಸಿದ್ದಾರೆ.

Actor Darshan Wife Vijayalakshmi Files Criminal Defamation Case Against Actor Dhanveerrah
ನನ್ನ ಫ್ಯಾಮಿಲಿ ಬಗ್ಗೆ ಮಾತಾಡೋಕೆ ಯಾರಿಗೂ ಅಧಿಕಾರ ಇಲ್ಲ: ಜೈಲಿನಿಂದಲೇ ಧನ್ವೀರ್​ಗೆ ದರ್ಶನ್ ವಾರ್ನಿಂಗ್!

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 356(2) ರ ಅಡಿಯಲ್ಲಿ ಮಾನನಷ್ಟ ಆರೋಪ ಹೊರಿಸಲಾಗಿದ್ದು, ಆರೋಪಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ ದಾಖಲೆಗಳು, ಆಡಿಯೋ/ವೀಡಿಯೋ ರೆಕಾರ್ಡಿಂಗ್‌ಗಳನ್ನು ಸೂಕ್ತ ಸಾಕ್ಷ್ಯವಾಗಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಜಯಲಕ್ಷ್ಮೀ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣೆಗೆ ಅವಕಾಶ ನೀಡಬೇಕು ಹಾಗೂ ಬಿಎನ್‌ಎಸ್ ಸೆಕ್ಷನ್ 222(1) ರ ಅಡಿಯಲ್ಲಿ ಈ ಖಾಸಗಿ ದೂರನ್ನು ಪರಿಗಣಿಸಿ, ಆರೋಪಿ ಧನ್ವೀರ್ ವಿರುದ್ಧ ಸೆಕ್ಷನ್ 227 ರ ಅಡಿಯಲ್ಲಿ ಸಮನ್ಸ್ ಜಾರಿಗೊಳಿಸಬೇಕೆಂದು ನ್ಯಾಯಾಲಯಕ್ಕೆ ಕೋರಲಾಗಿದೆ ಎಂದು ತಿಳಿದುಬಂದಿದೆ.

Actor Darshan Wife Vijayalakshmi Files Criminal Defamation Case Against Actor Dhanveerrah
'ಅಭಿಮಾನ ಇರಲಿ, ಹೆಣ್ಣಿನ ಗೌರವಕ್ಕೆ ಧಕ್ಕೆ ಬೇಡ'; ದರ್ಶನ್‌-ವಿಜಯಲಕ್ಷ್ಮಿ ವಿವಾದದ ನಡುವೆ ಅಶ್ವಿನಿ ಗೌಡ ಪೋಸ್ಟ್!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X