

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಕುಟುಂಬದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಿದ್ದರು.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರ ವೈಎಸ್ ಅನಿಲ್ ರೆಡ್ಡಿ ಅವರ ಪುತ್ರಿ ವೈಎಸ್ ಶ್ರೇಯಾ ರೆಡ್ಡಿ ಮತ್ತು ಉಜ್ವಲ್ ಬಲೆನಿ ಅವರ ಮದುವೆಯ ಆರತಕ್ಷತೆ ಇಂದು ಸಂಜೆ ಚೆನ್ನೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.
ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ವಿಜಯ್, ನಟಿ ತ್ರಿಷಾ ಹಾಗೂ ಮುಖ್ಯಮಂತ್ರಿಗಳ ತಾಯಿ ಶೋಬಾ ಚಂದ್ರಶೇಖರ್ ಕಾರ್ಯಕ್ರಮಕ್ಕೆ ಆಗಮಿಸಿ ನವದಂಪತಿಗಳಿಗೆ ಶುಭ ಕೋರಿದರು.
ಇದರ ವಿಡಿಯೋ ಹಾಗೂ ಫೋಟೋಗಳು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಖ್ಯಾತ ಉದ್ಯಮಿ ಗೌತಮ್ ಅದಾನಿ ಭಾಗವಹಿಸಿದ್ದರು.