ರಿಷಬ್ ಶೆಟ್ಟಿ ಮ್ಯೂಸಿಕ್ ತೆಕ್ಕೆಗೆ 'ಸಮುದ್ರ ಮಂಥನ' ಸಿನಿಮಾ Audio ರೈಟ್ಸ್!

‘ನಂದಗೋಕುಲ’, ‘ಗಂಡ-ಹೆಂಡತಿ’ ಮತ್ತು ‘ಅಮೃತಧಾರೆ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿರುವ ಕಿರುತೆರೆ ನಟ ಯಶವಂತ್ ಕುಮಾರ್, ಇದೀಗ ‘ಸಮುದ್ರ ಮಂಥನ’ ಎಂಬ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೂಲಕ ಹಿರಿತೆರೆಗೆ ಬರಲು ಸಜ್ಜಾಗಿದ್ದಾರೆ.
ಈ ಚಿತ್ರಕ್ಕೆ ಮತ್ತಷ್ಟು ಬಲ ಸಿಕ್ಕಿದ್ದು, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರ ಸಂಗೀತ ಸಂಸ್ಥೆ ‘ರಿಷಬ್ ಶೆಟ್ಟಿ ಮ್ಯೂಸಿಕ್’ ಚಿತ್ರದ ಆಡಿಯೋ ಹಕ್ಕುಗಳನ್ನು ಅಧಿಕೃತವಾಗಿ ಖರೀದಿಸಿದೆ.
ಈ ಬೆಳವಣಿಗೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ರಿಷಬ್ ಶೆಟ್ಟಿ, “ಸಂಗೀತದೊಂದಿಗೆ ಮತ್ತೊಂದು ಸುಂದರ ಪಯಣ, ಹೊಸ ಒಡನಾಟ, ಹೊಸ ಸಂಗೀತದ ಯಾತ್ರೆ. ‘ರಿಷಬ್ ಶೆಟ್ಟಿ ಮ್ಯೂಸಿಕ್’ ಸಂಸ್ಥೆಯು ‘ಸಮುದ್ರ ಮಂಥನ’ ಚಿತ್ರದ ಸಂಗೀತ ಹಕ್ಕುಗಳನ್ನು ಪಡೆದುಕೊಂಡಿರುವುದನ್ನು ಪ್ರಕಟಿಸಲು ಸಂತೋಷವಾಗುತ್ತಿದೆ. ಹೊಸ ಆರಂಭಗಳು, ಅರ್ಥಪೂರ್ಣ ಸಹಯೋಗಗಳು ಮತ್ತು ಇನ್ನಷ್ಟು ಸುಂದರ ಸಂಗೀತದ ನೆನಪುಗಳಿಗೆ ಶುಭಾರಂಭವಾಗಲಿ ಎಂದು ಬರೆದುಕೊಂಡಿದ್ದಾರೆ.
‘ನಂದಗೋಕುಲ’ ಧಾರಾವಾಹಿಯಲ್ಲಿ ಕೇಶವ ಪಾತ್ರದ ಮೂಲಕ ಯಶವಂತ್ ಕುಮಾರ್ ಮನೆಮಾತಾಗಿದ್ದರು. ಇದೀಗ ಅವರು ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೆ ಸಚಿನ್ ನಿರ್ದೇಶನ ಮಾಡಿದ್ದು, ಈ ಹಿಂದೆ ‘ಒಂದು ಶಿಕಾರಿಯ ಕಥೆ’ ಚಿತ್ರದ ಮೂಲಕ ಮೆಚ್ಚುಗೆ ಗಳಿಸಿದ್ದರು. ‘ಬ್ಲಿಂಕ್’ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ಚಿತ್ರದಲ್ಲಿ ಯಶವಂತ್‌ಗೆ ನಾಯಕಿಯಾಗಿ ನಟಿಸಿದ್ದಾರೆ.
ರಫ್ ಕಟ್ ಪ್ರೊಡಕ್ಷನ್ಸ್, ಎ ಸ್ಕ್ವೇರ್ ಮತ್ತು ಆರುಷ್ ಪಿಕ್ಚರ್ಸ್ ಸಂಸ್ಥೆಗಳ ಅಡಿಯಲ್ಲಿ ಜಂಟಿಯಾಗಿ ನಿರ್ಮಾಣವಾಗಿರುವ ‘ಸಮುದ್ರ ಮಂಥನ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.
ಸದ್ಯ ಸಂಕಲನ ಸೇರಿದಂತೆ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಕಾಯಲಾಗುತ್ತಿದೆ. ಮುಂದಿನ ಕೆಲವು ತಿಂಗಳಲ್ಲಿ ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.
ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ನಿಶಾಂತ್ ಮಧುಗಿರಿ ಮತ್ತು ಮನೋಜ್ ಚಂದ್ರಕಾಂತ್ ಸಂಗೀತ ಸಂಯೋಜಿಸಿದ್ದಾರೆ. ತ್ರಿಲೋಕ್ ತ್ರಿವಿಕ್ರಮ್ ಸಾಹಿತ್ಯ ರಚಿಸಿದ್ದಾರೆ. ಸಿದ್ಧಾರ್ಥ್ ಬೆಲ್ಮಣ್ಣು, ಅನಿರುದ್ಧ ಶಾಸ್ತ್ರಿ, ಮೈಮ್ ರಾಮದಾಸ್, ಐರಾ ಉಡುಪಿ ಮತ್ತು ಕರಿಬಸವ ತಡಕಲ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



