ಸಿನಿಮಾ ಸುದ್ದಿ

6 ವರ್ಷಗಳ ಪ್ರೀತಿಗೆ ಬಿತ್ತು ಮದುವೆ ಮುದ್ರೆ: ವರುಣ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ Bigg Boss ಖ್ಯಾತಿಯ ಸ್ಪಂದನಾ ಸೋಮಣ್ಣ!

6 ವರ್ಷಗಳ ಪ್ರೀತಿಗೆ ಬಿತ್ತು ಮದುವೆ ಮುದ್ರೆ: ವರುಣ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ Bigg Boss ಖ್ಯಾತಿಯ ಸ್ಪಂದನಾ ಸೋಮಣ್ಣ!
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಪಂದನಾ ಸೋಮಣ್ಣ
Published On :

ಮೈಸೂರು: ಕನ್ನಡ ಕಿರುತೆರೆ ಹಾಗೂ 'ಬಿಗ್ ಬಾಸ್ ಕನ್ನಡ ಸೀಸನ್ 12'ರ ಮೂಲಕ ಕರ್ನಾಟಕದ ಮನೆಮಾತಾಗಿರುವ ಜನಪ್ರಿಯ ನಟಿ ಸ್ಪಂದನಾ ಸೋಮಣ್ಣ ಅವರು ಭಾನುವಾರ (ನವೆಂಬರ್ 29) ತಮ್ಮ ಬಹುಕಾಲದ ಪ್ರಿಯಕರ ವರುಣ್ ಮುನಿರಾಜು ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತಮ್ಮ ಹುಟ್ಟೂರಾದ ಮೈಸೂರಿನಲ್ಲಿ ಕುಟುಂಬಸ್ಥರು, ಆಪ್ತರು ಹಾಗೂ ಕಿರುತೆರೆ ಗಣ್ಯರ ಸಮ್ಮುಖದಲ್ಲಿ ಈ ಜೋಡಿ ಸಾಂಪ್ರದಾಯಿಕವಾಗಿ ಹಸೆಮಣೆ ಏರಿದೆ.

ಸ್ಪಂದನಾ ಸೋಮಣ್ಣ ಮತ್ತು ವರುಣ್ ಮುನಿರಾಜು ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಪ್ಯಾರಿಸ್‌ನ ಐಫೆಲ್ ಟವರ್ ಎದುರು ವರುಣ್ ಅವರು ಸ್ಪಂದನಾ ಅವರಿಗೆ ಪ್ರಪೋಸ್ ಮಾಡುವ ಮೂಲಕ ತಮ್ಮ ಪ್ರೀತಿಯನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದರು. ಇದೀಗ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಈ ಜೋಡಿ ವೈವಾಹಿಕ ಜೀವನಕ್ಕೆ ಅಡಿಯಿಟ್ಟಿದೆ.

ಮದುವೆ ಹಾಗೂ ಆರತಕ್ಷತೆ ಕಾರ್ಯಕ್ರಮದಲ್ಲಿ 'ಬಿಗ್ ಬಾಸ್ ಕನ್ನಡ ಸೀಸನ್ 12'ರ ಸಹ ಸ್ಪರ್ಧಿಗಳು ಭಾಗವಹಿಸಿ ಸಂಭ್ರಮಕ್ಕೆ ಮೆರುಗು ನೀಡಿದರು.

ಸೀಸನ್ 12ರ ವಿಜೇತ ಗಿಲ್ಲಿ ನಟ, ರನ್ನರ್ ಅಪ್ ಕಾವ್ಯ ಶೈವ, ರಾಶಿಕಾ ಶೆಟ್ಟಿ, ಮ್ಯೂಟೆಂಟ್ ರಘು, ರಿಷಾ ಗೌಡ ಸೇರಿದಂತೆ ಕಿರುತೆರೆ ಮತ್ತು ಚಿತ್ರರಂಗದ ಅನೇಕ ಸ್ನೇಹಿತರು ನವದಂಪತಿಗೆ ಶುಭ ಹಾರೈಸಿದರು.

ಮದುವೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಶುಭಾಶಯಗಳ ಮಳೆಗರೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.