IFFI 2026: ‘ಕಾಂತಾರ ಚಾಪ್ಟರ್ -1ʼ ಅಭಿನಯಕ್ಕಾಗಿ ರಿಷಬ್ ಶೆಟ್ಟಿಗೆ Silver Peacock Award

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ವೇದಿಕೆಯಲ್ಲಿ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈ ಮೂಲಕ ಕನ್ನಡ ಚಿತ್ರರಂಗ ಮತ್ತೊಮ್ಮೆ ದೇಶದ ಗಮನ ಸೆಳೆದಿದೆ. ಕಾಂತಾರ ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಿಷಭ್ ಶೆಟ್ಟಿ ಮನ್ನಣೆ ಗಳಿಸಿದ್ದಾರೆ.
ರಿಷಬ್ ಶೆಟ್ಟಿಗೆ ರಜತ ಮಯೂರ (silver peacock award ಪ್ರಶಸ್ತಿ
57ನೇ ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭ ನವೆಂಬರ್ 28ರಂದು ನಡೆದಿದ್ದು, ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1 ಚಿತ್ರದಲ್ಲಿ ಅವರು ನಿರ್ವಹಿಸಿದ ಪಾತ್ರ ಮತ್ತು ಅಭಿನಯಕ್ಕೆ ಜ್ಯೂರಿ ಮೆಚ್ಚುಗೆ ವ್ಯಕ್ತಪಡಿಸಿದೆ. ರಜತ ಮಯೂರ ಪ್ರಶಸ್ತಿ (Silver Peacock Award) ಪಡೆದ ರಿಷಬ್ ಗೆ 15 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ನೀಡಲಾಗಿದೆ. ಈ ಗೌರವ ರಿಷಬ್ ನಟನಾ ಸಾಮರ್ಥ್ಯಕ್ಕೆ ದೊರೆತ ಮತ್ತೊಂದು ಪ್ರಮುಖ ಮನ್ನಣೆಯಾಗಿದೆ.
ರಿಷಬ್ ಶೆಟ್ಟಿ ಅಭಿನಯವಷ್ಟೇ ಅಲ್ಲದೇ ಕಾಂತಾರ ಚಾಪ್ಟರ್ 1 ಚಿತ್ರದ ನಿರೂಪಣೆ, ಕಥೆಯ ಪ್ರಸ್ತುತಿ ಮತ್ತು ತಾಂತ್ರಿಕ ಅಂಶಗಳಿಗೂ ಚಿತ್ರೋತ್ಸವದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು ಜ್ಯೂರಿ ವಿಶೇಷ ಉಲ್ಲೇಖ (Special Mention) ನೀಡಿದೆ.
ಸ್ವರ್ಣ ಮಯೂರ ಗೆದ್ದ ಪೋರ್ಚುಗೀಸ್ ಸಿನಿಮಾ
ಚಿತ್ರೋತ್ಸವದ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪೋರ್ಚುಗೀಸ್ ಸಿನಿಮಾ ಅಕ್ವಿ (Aqui) ಸ್ವರ್ಣ ಮಯೂರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ವಿಸಿಟೇಶನ್ ಚಿತ್ರದ ನಿರ್ದೇಶನಕ್ಕಾಗಿ ವೋಲ್ಕರ್ ಷೋಂಡೋರ್ಫ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


