ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ನಾನಾ ಪಾಟೇಕರ್ ಸಾವಿಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಿಕೊಂಡಿರುವ ಗೋವಾ ಪೊಲೀಸರು, ಪಿಎಸ್‌ಐ ನಿತಿನ್ ನಾಯಕ್ ಅವರ ನೇತೃತ್ವದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.
Nana Patekar
ನಾನಾ ಪಾಟೇಕರ್
Updated on: 

ಪಣಜಿ: ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಅವರ ಸಾವು ಹೊಸ ತಿರುವು ಪಡೆದುಕೊಂಡಿದ್ದು, ಗೋವಾದ ಪಣಜಿ ಪೊಲೀಸರು 'ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ'ಯ(BNSS) ಸೆಕ್ಷನ್ 194 ರ ಅಡಿಯಲ್ಲಿ ಅಸಹಜ ಸಾವು (UD) ಪ್ರಕರಣವನ್ನು ದಾಖಲಿಸಿದ್ದಾರೆ.

ಪೊಲೀಸ್ ದಾಖಲೆಗಳ ಪ್ರಕಾರ, ನಾನಾ ಪಾಟೇಕರ್ ಅವರು ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರುವಷ್ಟರಲ್ಲಿಯೇ 76 ವರ್ಷದ ನಟ ಮೃತಪಟ್ಟಿದ್ದಾರೆ.

ನಾನಾ ಪಾಟೇಕರ್ ಸಾವಿಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಿಕೊಂಡಿರುವ ಗೋವಾ ಪೊಲೀಸರು, ಪಿಎಸ್‌ಐ ನಿತಿನ್ ನಾಯಕ್ ಅವರ ನೇತೃತ್ವದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

Nana Patekar
ಆತ್ಮಹತ್ಯೆ ಮಾಡಿಕೊಂಡ 500 ರೈತರ ಪತ್ನಿಯರ ನೆರವಿಗೆ ಧಾವಿಸಿದ್ದ ನಟ ನಾನಾ ಪಾಟೇಕರ್; 'ಆರೋಗ್ಯ ಕಾರ್ಡ್‌' ವಿತರಣೆ

ಗುರುವಾರ ರಾತ್ರಿ ಪುಣೆಯ ಡಾಂಜೆಯಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಅಂತ್ಯಕ್ರಿಯೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್, "ನಾನಾ ಸಾಹೇಬ್ ಅವರಂತಹ ವ್ಯಕ್ತಿ ಎಂದಿಗೂ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗುವುದಿಲ್ಲ; ಅವರ ಸಾಧನೆಗಳು ಅವರನ್ನು ಅಮರರನ್ನಾಗಿ ಮಾಡಿವೆ. ಎರಡನೆಯದಾಗಿ, ಪ್ರತಿಯೊಬ್ಬರೂ ಒಗ್ಗೂಡಿ ಜಾಗತಿಕ ಮಟ್ಟದಲ್ಲಿ ಧರ್ಮದ ಅಥವಾ ಸನ್ಮಾರ್ಗದ ಹಾದಿಯಲ್ಲಿ ನಡೆಯಬೇಕು ಎಂದು ಅವರು ಯಾವಾಗಲೂ ಬಯಸಿದ್ದರು. ಮೂರನೆಯದಾಗಿ, ಭವಿಷ್ಯದ ವಿಷಯಕ್ಕೆ ಬಂದರೆ - ನಾನಾ ಸಾಹೇಬ್ ಬಿಟ್ಟುಹೋದ ದೃಷ್ಟಿಕೋನವನ್ನು ಮುಂದುವರಿಸಿಕೊಂಡು ಹೋಗುವುದೇ ತಾವು ಮುಂದಿನ ಜೀವನವನ್ನು ರೂಪಿಸಿಕೊಳ್ಳುವ ವಿಧಾನವಾಗಿದೆ" ಎಂದು ಹೇಳಿದ್ದಾರೆ.

ಗುರುವಾರ ಬೆಳಿಗ್ಗೆ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಹೊರಬಿದ್ದಿತು ಮತ್ತು ಅಂದಿನಿಂದ ಅವರಿಗೆ ಶ್ರದ್ಧಾಂಜಲಿಗಳ ಮಹಾಪೂರವೇ ಹರಿದುಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com