

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಮನೆಯಲ್ಲಿ ಮದುವೆ ಸಂಭ್ರಮ ಮುಗಿಲುಮುಟ್ಟಿದೆ. ಅರ್ಜುನ್ ಸರ್ಜಾ ಅವರ ಎರಡನೇ ಪುತ್ರಿ ಅಂಜನಾ ಅರ್ಜುನ್, ಉದ್ಯಮಿ ಇಸಾಯ್ ನಟ್ಟರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂಜನಾ ಬರೋಬ್ಬರಿ 14 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಎರಡೂ ಕುಟುಂಬಗಳ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.
ಇಸಾಯ್ ನಟ್ಟರ್ ಯಶಸ್ವಿ ಉದ್ಯಮಿಯಾಗಿದ್ದು ಮಾರ್ಕೆಟಿಂಗ್ ಮತ್ತು ಜಾಗತಿಕ ಬ್ರ್ಯಾಂಡಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಅಂಜನಾ ಮತ್ತು ಇಸಾಯ್ ಅವರ ಈ ಶುಭ ವಿವಾಹಕ್ಕೆ ಇಡೀ ಸರ್ಜಾ ಕುಟುಂಬ ಸಾಕ್ಷಿಯಾಗಿದೆ.
ಕಳೆದ ವರ್ಷ ಇಟಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಂಜನಾ ಮತ್ತು ಇಸಾಯ್ ಇದೀಗ ಭಾರತೀಯ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಮದುವೆಯ ಫೋಟೋಗಳನ್ನು ಅಂಜನಾ ಹಂಚಿಕೊಂಡ ಬಳಿಕ ಅಭಿಮಾನಿಗಳು ನವಜೋಡಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.