ಕರ್ನಾಟಕದಲ್ಲಿ 'ರಾಮಾಯಣ' ಚಿತ್ರ ವಿತರಣೆ ಹೊಣೆ ಹೊತ್ತ ನಟ ಯಶ್‌ ಒಡೆತನದ 'ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್'

ನಿರ್ಮಾಪಕ ನಮಿತ್ ಮಲ್ಹೋತ್ರಾ (DNEG) ಅವರು ಯಶ್ ಸಹಯೋಗದೊಂದಿಗೆ ಈ ಚಿತ್ರವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿದ್ದಾರೆ.
Yash in a poster for Ramayana
ರಾಮಾಯಣ ಪೋಸ್ಟರ್‌ನಲ್ಲಿ ಯಶ್
Updated on: 

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ 'ರಾಮಾಯಣ' ಚಿತ್ರವು ಬಿಡುಗಡೆಗೆ ಸಜ್ಜಾಗುತ್ತಿರುವ ಹೊತ್ತಲ್ಲೇ, ಈ ಮಹತ್ವಾಕಾಂಕ್ಷೆಯ ಯೋಜನೆಗೆ ಸಂಬಂಧಿಸಿದಂತೆ ಹೊಸ ಮಾಹಿತಿಯೊಂದು ಹೊರಬಿದ್ದಿದೆ. ಚಿತ್ರದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸುವುದರ ಜೊತೆಗೆ ಈ ಚಿತ್ರದ ಸಹ-ನಿರ್ಮಾಪಕರಾಗಿರುವ ಯಶ್, ಈ ಯೋಜನೆಯಲ್ಲಿ ಮತ್ತೊಂದು ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.ಯಶ್ ಅವರ ಸ್ವಂತ ನಿರ್ಮಾಣ ಸಂಸ್ಥೆಯಾದ 'ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್' (Monster Mind Creations), ಕರ್ನಾಟಕದಾದ್ಯಂತ ಈ ಚಿತ್ರದ ವಿತರಣಾ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಳ್ಳಲಿದೆ.

ಈ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಮತ್ತು ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ ಹನುಮಂತನಾಗಿ ಸನ್ನಿ ಡಿಯೋಲ್, ಲಕ್ಷ್ಮಣನಾಗಿ ರವಿ ದುಬೆ ಹಾಗೂ ದಶರಥ ಮಹಾರಾಜನಾಗಿ ಅರುಣ್ ಗೋವಿಲ್ ನಟಿಸುತ್ತಿದ್ದಾರೆ. ಅಲ್ಲದೆ, ಲಾರಾ ದತ್ತಾ, ಕಾಜಲ್ ಅಗರ್ವಾಲ್ ಮತ್ತು ರಕುಲ್ ಪ್ರೀತ್ ಸಿಂಗ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ನಿರ್ಮಾಪಕ ನಮಿತ್ ಮಲ್ಹೋತ್ರಾ (DNEG) ಅವರು ಯಶ್ ಸಹಯೋಗದೊಂದಿಗೆ ಈ ಚಿತ್ರವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಅತ್ಯಾಧುನಿಕ ದೃಶ್ಯ ಪರಿಣಾಮಗಳು (Visual Effects) ಮತ್ತು ಉನ್ನತ ಮಟ್ಟದ ತಾಂತ್ರಿಕ ಕೌಶಲಗಳನ್ನು ಬಳಸಲಾಗಿದ್ದು, ಇವುಗಳನ್ನು ವಿಶೇಷವಾಗಿ 3D ಸೇರಿದಂತೆ ಪ್ರೀಮಿಯಂ ಸ್ವರೂಪಗಳಿಗಾಗಿಯೇ ವಿನ್ಯಾಸಗೊಳಿಸಲಾಗಿದೆ.

Yash in a poster for Ramayana
ಕನ್ನಡ ಚಿತ್ರರಂಗದ ಭಾಗವಾಗಿರುವುದಕ್ಕೆ ಹೆಮ್ಮೆ ಇದೆ: ರಾಮಾಯಣವನ್ನು ಜಗತ್ತಿನಾದ್ಯಂತ ಕೊಂಡೊಯ್ಯಬೇಕು; ಯಶ್

ಕರ್ನಾಟಕದಲ್ಲಿ ಮುಂಜಾನೆಯ ಪ್ರದರ್ಶನಗಳ ಟಿಕೆಟ್ ಮಾರಾಟವು ಅಕ್ಟೋಬರ್ 28 ರಂದು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಲಿದೆ ಎಂದು ಚಿತ್ರತಂಡ ಖಚಿತಪಡಿಸಿದೆ. 'ರಾಮಾಯಣ' ಚಿತ್ರವು ನವೆಂಬರ್ 5 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com