KVN ಪ್ರೊಡಕ್ಷನ್‌ನಿಂದ ವಂಚನೆ! ನಿರ್ಮಾಪಕರ ಸಂಘದ ಮೆಟ್ಟಿಲೇರಿದ ಬಲರಾಮನ ದಿನಗಳು ತಂಡ; 2 ಕೋಟಿ ಪರಿಹಾರಕ್ಕೆ ಬೇಡಿಕೆ

ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ನಿಂದ ಉಂಟಾಗಿರುವ ಆರ್ಥಿಕ ನಷ್ಟಕ್ಕೆ ₹2 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪದ್ಮಾವತಿ ಫಿಲ್ಮ್ಸ್ ನಿರ್ಮಾಪಕರು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ದೂರು ಸಲ್ಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Balaramana Dinagalu Makers File Complaint Against KVN Productions Demanding 2 Crore Compensation
KVN ಪ್ರೊಡಕ್ಷನ್‌ ವಿರುದ್ಧ ನಿರ್ಮಾಪಕರ ಸಂಘದ ಮೆಟ್ಟಿಲೇರಿದ ಬಲರಾಮನ ದಿನಗಳು ತಂಡOnline Desk
Updated on

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಹಾಗೂ ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ಜನ ನಾಯಗನ್ ಚಿತ್ರಗಳ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ವಿರುದ್ಧ ಬಲರಾಮನ ದಿನಗಳು ಸಿನಿಮಾದ ವಿತರಣೆಗೆ ಸಂಬಂಧಿಸಿದಂತೆ ಪದ್ಮಾವತಿ ಫಿಲ್ಮ್ಸ್ ನಿರ್ಮಾಪಕರು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಮೆಟ್ಟಿಲೇರಿದ್ದು, ಕೆವಿಎನ್ ಪ್ರೊಡಕ್ಷನ್ಸ್ ನಿಂದ ಉಂಟಾಗಿರುವ ಆರ್ಥಿಕ ನಷ್ಟಕ್ಕೆ ₹2 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವಂಚನೆ ನಡೆದಿದ್ದು ಹೇಗೆ?

ಪದ್ಮಾವತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಬಲರಾಮನ ದಿನಗಳು ಚಿತ್ರದ ಚಿತ್ರಮಂದಿರಗಳ ಬಿಡುಗಡೆ ಹಾಗೂ ವಿತರಣೆಯ ಜವಾಬ್ದಾರಿಯನ್ನು ಕೆವಿಎನ್ ಸಂಸ್ಥೆ ಹೊತ್ತುಕೊಂಡಿತ್ತು. ಆದರೆ ಸಿನಿಮಾ ಬಿಡುಗಡೆಯಾದ ಬಳಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಮತ್ತು ಆದಾಯ ಹಂಚಿಕೆಯ ಸೂಕ್ತ ಲೆಕ್ಕಪತ್ರಗಳನ್ನು ನೀಡದೆ ಬಾಕಿ ಹಣ ಪಾವತಿಸಿಲ್ಲ ಎಂದು ನಿರ್ಮಾಪಕರಾದ ಶ್ರೇಯಸ್ ಮತ್ತು ಪದ್ಮಾವತಿ ಆರೋಪಿಸಿದ್ದಾರೆ. ಜೊತೆಗೆ, ಚಿತ್ರಕ್ಕೆ ಸಾಕಷ್ಟು ಚಿತ್ರಮಂದಿರಗಳ ಬೆಂಬಲ ನೀಡದೆ, ಕೆವಿಎನ್ ಸಂಸ್ಥೆಗೆ ಸಂಬಂಧಿಸಿದ ಚಿತ್ರಮಂದಿರಗಳಿಗೆ ಮಾತ್ರ ಹೆಚ್ಚಿನ ಆದ್ಯತೆ ನೀಡಿ ಚಿತ್ರಕ್ಕೆ ಹಿನ್ನಡೆಯಾಗುವಂತೆ ಮಾಡಲಾಗಿದೆ ಎಂದು ದೂರಲಾಗಿದ್ದು, ಸಿನಿಮಾದ ಒಟಿಟಿ ಮತ್ತು ಸ್ಯಾಟಲೈಟ್ ಹಕ್ಕುಗಳ ನಿರ್ವಹಣೆ ಹಾಗೂ ಎಸ್‌ಎಸ್‌ಎಸ್ ಎಂಟರ್‌ಪ್ರೈಸಸ್ ಮೂಲಕ ನಡೆಸಿರುವ ಹಣಕಾಸು ವಹಿವಾಟಿನಲ್ಲಿ ಅಕ್ರಮಗಳು ನಡೆದಿವೆ ಎಂದು ನಿರ್ಮಾಪಕರು ಆರೋಪಿಸಿದ್ದಾರೆ.

ಮುಂದುವರೆದು, ಕೆವಿಎನ್ ಸಂಸ್ಥೆ ಹಾಗೂ ಸಂಬಂಧಪಟ್ಟವರ ವ್ಯವಹಾರದಿಂದ ತಮಗೆ ಭಾರಿ ಆರ್ಥಿಕ ನಷ್ಟ ಸಂಭವಿಸಿದ್ದು, ತಕ್ಷಣವೇ ₹2 ಕೋಟಿ ರೂಪಾಯಿ ಪರಿಹಾರ ಕೊಡಿಸಬೇಕೆಂದು ನಿರ್ಮಾಪಕರು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಬಳಿ ಮನವಿ ಮಾಡಿದ್ದಾರೆ.

Balaramana Dinagalu Makers File Complaint Against KVN Productions Demanding 2 Crore Compensation
'ಕಾಂತಾರ 3' ಬಗ್ಗೆ ಬಿಗ್ ಅಪ್ಡೇಟ್: ಸೀಕ್ವೆಲ್ ಬಗ್ಗೆ ಮಹತ್ವದ ಸುಳಿವು ನೀಡಿದ ರಿಷಭ್ ಶೆಟ್ಟಿ; ಶೀಘ್ರದಲ್ಲೇ ತೆರೆಗೆ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com