ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಆಷಾಢ. ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಏಳನೇ ತಿಂಗಳು. ಈ ಮಾಸ ಪ್ರಾರಂಭವಾದ ನಂತರ ಶುಭ ಕಾರ್ಯಗಳಾದ ಮದುವೆಯ ಮಾತುಕತೆ, ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ ನೆಡೆಯುವುದೇ ಇಲ್ಲ. ಭಾರತದಲ್ಲಿ ಆಷಾಢ ಎಂದರೆ ಅನಿಷ್ಟ ಎನ್ನುವಷ್ಟು ನಂಬಿಕೆ ಮನೆಮಾಡಿದೆ.