ನಿನ್ನೆಯಷ್ಟೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯವನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಿದರೂ ನಮಗೇನು ತೊಂದರೆ ಇಲ್ಲ ಎಂದಿದ್ದರು. ಈ ಬಗ್ಗೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಠಾಕೂರ್, 'ಐಪಿಎಲ್ ನಿಂದಾಗಿ ಮಹಾರಾಷ್ಟ್ರ ಸರ್ಕಾರಕ್ಕೆ 100 ಕೋಟಿ ಲಾಭವಾಗುತ್ತಿದೆ. ಒಂದು ವೇಳೆ ಪಂದ್ಯಾವಳಿ ಸ್ಥಳಾಂತರವಾದರೆ ರಾಜ್ಯಕ್ಕೆ 100 ಕೋಟಿ ರುಪಾಯಿ ನಷ್ಟವಾಗುತ್ತದೆ' ಎಂದಿದ್ದಾರೆ.