ಮಹಾರಾಷ್ಟ್ರದಲ್ಲಿ ಬರ: ಐಪಿಎಲ್ ಸ್ಥಳಾಂತರಕ್ಕೆ ಬಾಂಬೆ ಹೈಕೋರ್ಟ್ ಆದೇಶ

ಮಹಾರಾಷ್ಟ್ರದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಏಪ್ರಿಲ್ 30ರ ನಂತರ ಎಲ್ಲಾ ಐಪಿಎಲ್ ಪಂದ್ಯಗಳನ್ನು ರಾಜ್ಯದಿಂದ ಸ್ಥಳಾಂತರಿಸುವಂತೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಮುಂಬೈ: ಮಹಾರಾಷ್ಟ್ರದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಏಪ್ರಿಲ್ 30ರ ನಂತರ ಎಲ್ಲಾ ಐಪಿಎಲ್ ಪಂದ್ಯಗಳನ್ನು ರಾಜ್ಯದಿಂದ ಸ್ಥಳಾಂತರಿಸುವಂತೆ ಬುಧವಾರ ಬಾಂಬೆ ಹೈಕೋರ್ಟ್ ಆದೇಶಿಸಿದೆ.
ಬರಗಾಲ ಪೀಡಿತ ಜನರನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್, ಏಪ್ರಿಲ್ 30ರವರೆಗೆ ನಿಗದಿಯಾಗಿರುವ ಪಂದ್ಯಗಳನ್ನು ಮಾತ್ರ ರಾಜ್ಯದಲ್ಲಿ ನಡೆಸಿ, ನಂತರದ ಪಂದ್ಯಗಳನ್ನು ರಾಜ್ಯದಿಂದ ಸ್ಥಳಾಂತರಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಸೂಚಿಸಿದೆ. ಇದರಿಂದಾಗಿ ಬಿಸಿಸಿಐಗೆ ಭಾರಿ ಹಿನ್ನಡೆಯಾಗಿದ್ದು, ಈಗ ಒಟ್ಚು 13 ಪಂದ್ಯಗಳನ್ನು ಸ್ಥಳಾಂತರಿಸಬೇಕಾಗಿದೆ.
ಇದೇ ವೇಳೆ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸುವುದರಿಂದ ಸಮಸ್ಯೆ ಪರಿಹಾರವಾಗಲ್ಲ. ಮೈದಾನದ ಪಿಚ್ ಗೆ ಬಳಸುತ್ತಿದ್ದ ನೀರನ್ನು ಬರಪೀಡಿತ ಪ್ರದೇಶಗಳಿಗೆ ಒದಗಿಸಿದರೆ ಸ್ವಲ್ಪ ಮಟ್ಟಿನ ಸಮಸ್ಯೆ ಸುಧಾರಿಸಬಹುದು ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಮಹಾರಾಷ್ಟ್ರದಲ್ಲಿ ಜನರು ತೀವ್ರ ಬರಗಾಲ ಎದುರಿಸುತ್ತಿರುವಾಗ ಐಪಿಎಲ್ ಆಟಕ್ಕಾಗಿ ಕ್ರಿಕೆಟ್ ಪಿಚ್ ಗಳ ನಿರ್ವಹಣೆಗೆಂದು ಪ್ರತಿದಿನ ಲಕ್ಷಾಂತರ ಲೀಟರ್ ನೀರನ್ನು ದುರುಪಯೋಗಪಡಿಸಲಾಗುತ್ತಿದೆ ಎಂದು ಪ್ರಜಾಸತ್ತೆ ಸುಧಾರಣೆ ಲೋಕಸತ್ತ ಮೂವ್ ಮೆಂಟ್ ಮತ್ತು ಫೌಂಡೇಶನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅಲ್ಲದೆ ಐಪಿಎಲ್ ಪಂದ್ಯವನ್ನು ಸ್ಥಳಾಂತರಿಸಬೇಕು ಎಂದು ಮನವಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com