ಕ್ರಿಸ್ ಗೇಯ್ಲ್ ಫಾರ್ಮ್ ಬಗ್ಗೆ ಚಿಂತಿಸುವ ಅಗತ್ಯವಿಲ್ಲ: ವಿರಾಟ್ ಕೊಹ್ಲಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ಮೊದಲೆರಡು ಪಂದ್ಯಗಳಲ್ಲಿ ಒಂದಂಕಿಗೆ ಔಟಾಗಿದ್ದ ರಾಯಲ್ ಚಾಲಂಜರ್ಸ್ ಬೆಂಗಳೂರು ತಂಡದ...
ವಿರಾಟ್ ಕೊಹ್ಲಿ, ಕ್ರಿಸ್ ಗೇಯ್ಲ್
ವಿರಾಟ್ ಕೊಹ್ಲಿ, ಕ್ರಿಸ್ ಗೇಯ್ಲ್
Updated on: 

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ಮೊದಲೆರಡು ಪಂದ್ಯಗಳಲ್ಲಿ ಒಂದಂಕಿಗೆ ಔಟಾಗಿದ್ದ ರಾಯಲ್ ಚಾಲಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಫಾರ್ಮ್ ಬಗ್ಗೆ ಚಿಂತೆ ಪಡುವ ಅಗತ್ಯವಿಲ್ಲ ಎಂದು ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಐಪಿಎಲ್ ನ ಮೊದಲೆರೆಡು ಪಂದ್ಯಗಳಲ್ಲೂ ಒಟ್ಟಾರೆ ಗೇಯ್ಲ್ 1 ರನ್ ಗಳಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಭಾರಿ ಹೊಡೆತಗಳ ಸರದಾರ ಎಂಬ ಖ್ಯಾತಿ ಗಳಿಸಿರುವ ಗೇಯ್ಲ್ ಇನ್ನು ವಿಜೃಂಬಿಸದೆ ಇರುವುದು ಸೋಜಿಗದ ಸಂಗತಿ.

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ ಕ್ರಿಸ್ ಗೇಯ್ಲ್ 1 ರನ್ ಗಳಿಸಿದ್ದರು. ಕೊಹ್ಲಿ, ಎಬಿಡಿ ವಿಲಿಯರ್ಸ್ ಹಾಗೂ ವಾಟ್ಸನ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಆರ್ ಸಿಬಿ 227 ರನ್ ಗಳಿಸಿ ಹೈದರಾಬಾದ್ ವಿರುದ್ಧ 45 ರನ್ ಗಳ ಅಂತರದಿಂದ ಜಯಗಳಿಸಿತ್ತು.

ನಿನ್ನೆ ಬೆಂಗಳೂರಿನಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ವಿರುದ್ಧದ ಪಂದ್ಯದಲ್ಲೂ ಸಹ ಗೇಯ್ಲ್ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದರು. ಇದರಿಂದಾಗಿ ಗೇಯ್ಲ್ ಫಾರ್ಮ್ ಬಗ್ಗೆ ಅಪಸ್ವರಗಳು ಕೇಳಿಬಂದಿದ್ದವು.

ಇದಕ್ಕೆ ಉತ್ತರಿಸಿರುವ ಕೊಹ್ಲಿ ಗೇಯ್ಲ್ ಒಬ್ಬ ಉತ್ತಮ ಆಟಗಾರ ಅವರ ಫಾರ್ಮ್ ಬಗ್ಗೆ ಹೆಚ್ಚು ಆಂತಕ ಪಡುವ ಅಗತ್ಯವಿಲ್ಲ. ಯಾವುದೇ ಪಂದ್ಯದಲ್ಲಾದರೂ ಅವರು ಮತ್ತೆ ವಿಜೃಂಬಿಸಬಹುದು. ಅಲ್ಲದೆ ಟಿ20 ಪಂದ್ಯಗಳಲ್ಲಿ 17 ಶತಕಗಳನ್ನು ಸಿಡಿಸಿರುವ ಗೇಯ್ಲ್ ಸಾಧನೆ ತಮಾಷೆಯಲ್ಲ ಎಂದರು.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ 191 ರನ್ ಗಳನ್ನು ಗಳಿಸಿದ್ದರು. ಡೆಲ್ಲಿಯ ಸ್ಫೋಟಕ ಬ್ಯಾಟ್ಸ್ ಮನ್ ಕ್ವಿಂಟಾನ್ ಡಿ ಕಾಕ್ 51 ಎಸೆತಗಳಲ್ಲಿ 108 ರನ್ ಗಳನ್ನು ಸಿಡಿಸುವ ಮೂಲಕ ಡೆಲ್ಲಿ ತಂಡದ ಜಯಕ್ಕೆ ಕಾರಣರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com