
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ 192 ರನ್ ಗಳ ಬೃಹತ್ ಸವಾಲನ್ನು ಬೆನ್ನಟ್ಟಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡದ 19.1 ಓವರ್ ಗಳಲ್ಲಿ ಗುರಿ ಮುಟ್ಟಿ ಅಮೋಘ ಜಯ ಸಾಧಿಸಿದೆ.
ಡೆಲ್ಲಿ ಡೇರ್ ಡೆವಿಲ್ಸ್ ಪರ ಅಬ್ಬರಿಸಿದ ಕ್ವಿಂಟಾನ್ ಡಿ ಕಾಕ್ 51 ಎಸೆತಗಳಲ್ಲಿ 108 ರನ್ ಗಳನ್ನು ಸಿಡಿಸುವ ಮೂಲಕ ಡೆಲ್ಲಿ ತಂಡದ ಜಯಕ್ಕೆ ಕಾರಣರಾದರು.
ಡೆಲ್ಲಿ ಪರ ಶ್ರೇಯಸ್ ಅಯ್ಯರ್ 0, ಸ್ಯಾಮ್ಸನ್ 9, ಕರುಣ್ ನಾಯರ್ ಅಜೇಯ 54 ಜೆಪಿ ಡುಮಿನಿ ಅಜೇಯ 7 ರನ್ ಗಳಿಸಿದ್ದಾರೆ.
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಡೇರ್ ಡೆವಿಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ 200 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಡೇರ್ ಡೇವಿಲ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಇದರೊಂದಿಗೆ ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ನಿಗದಿತ ಓವರ್ ನಲ್ಲಿ 191 ಗಳಿಸಿ ಡೆಲ್ಲಿಗೆ 192 ರನ್ಗಳ ಸವಾಲು ನೀಡಿತು.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಔಟಾಗಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಈ ನಡುವೆ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಜತೆಯಾಟ ಆರ್ ಸಿಬಿ ಬೃಹತ್ ಮೊತ್ತ ಕಲೆ ಹಾಕಲು ಕಾರಣವಾಯಿತು. ಅಬ್ಬರದ ಬ್ಯಾಟಿಂಗ್ ನಡೆಸಿದ ಎಬಿಡಿ 33 ಎಸೆತಗಳಲ್ಲಿ 55 ರನ್ ಗಳಿಸಿ ಬ್ರಾಥ್ವೈಟ್ ಎಸೆತದಲ್ಲಿ ಮೊಹಮ್ಮದ್ ಶಮಿಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಎಬಿಡಿ ಬಳಿಕ ಕೊಹ್ಲಿಗೆ ಜತೆಯಾದ ಶೇನ್ ವಾಟ್ಸನ್ ಸಹ ಡೆಲ್ಲಿ ಬೌಲರ್ ಗಳ ಬೆವರಿಳಿಸಿದರು. ಕೇವಲ 19 ಎಸೆತಗಳಲ್ಲಿ 33 ರನ್ ಪೇರಿಸಿ ಔಟಾದರು. ಸರ್ಫರಾಜ್ ಖಾನ್ ಬಂದ ದಾರಿಗೆ ಸುಂಕವಿಲ್ಲವೆಂಬಂತೆ 1 ರನ್ ಗಳಿಸಿ ನಿರ್ಗಮಿಸಿದರು.
ಡೆಲ್ಲಿ ಡೇರ್ ಡೇವಿಲ್ಸ್ ಪರ ಜಹೀರ್ ಖಾನ್, ಮೊಹಮ್ಮದ್ ಶಮಿ ಹಾಗೂ ಬ್ರಾಥ್ವೈಟ್ ತಲಾ 1 ವಿಕೆಟ್ ಪಡೆದಿದ್ದಾರೆ.
Advertisement