ವರ್ಷಾಂತ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಹೊನಲು ಬೆಳಕಿನ ಟೆಸ್ಟ್

ಅದೇ ವರ್ಷಾಂತ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತನ್ನ ಮೊಟ್ಟಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯವನ್ನು ಆಡಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ...
ಹೊನಲು ಬೆಳಕಿನ ಟೆಸ್ಟ್
ಹೊನಲು ಬೆಳಕಿನ ಟೆಸ್ಟ್

ನವದೆಹಲಿ: ಅದೇ ವರ್ಷಾಂತ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತನ್ನ ಮೊಟ್ಟಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯವನ್ನು ಆಡಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಸ್ಪಷ್ಟಪಡಿಸಿದೆ.

ಗುಲಾಬಿ ಚೆಂಡು ಬಳಸಿಕೊಂಡು ನ್ಯೂಜಿಲೆಂಡ್ ವಿರುದ್ಧ ಇದೇ ವರ್ಷಾಂತ್ಯದಲ್ಲಿ ಹೊನಲು ಬೆಳಕಿನ ಟೆಸ್ಟ್ ಪಂದ್ಯ ನಡೆಯಲಿದೆ. ಇದಕ್ಕೆ ಪೂರ್ವಬಾವಿಯಾಗಿ ದುಲೀಪ್ ಟ್ರೋಫಿಯಲ್ಲಿ ಈ ಕುರಿತು ಪೂರ್ವಾಭ್ಯಾಸದ ಪ್ರಯೋಗ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಇನ್ನು ಪಂದ್ಯಕ್ಕೆ ಸಾಕಷ್ಟು ಸಂಗತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕಿದ್ದು, ಇನ್ನು ಸ್ಥಳ ನಿಗದಿ ಪಡಿಸಿಲ್ಲ. ಭಾರತದ ಪಿಚ್ ಗಳ ಮೇಲೆ ಮಂಜಿನಲ್ಲಿ ಗುಲಾಬಿ ಚೆಂಡಿನ ಮಲೂಕ ಸ್ಪಿನ್ನರ್ ಗಳು ಹೇಗೆ ಬೌಲ್ ಮಾಡುತ್ತಾರೆ ಎಂಬುದನ್ನು ಗಮನಿಸಬೇಕಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com